
ಬಳ್ಳಾರಿ,ಏ.6: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ರವರ 116ನೇ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಜ್‍ಕುಮಾರ್ ರಸ್ತೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಬುಧವಾರ ಡಾ.ಬಾಬು ಜಗಜೀವನ್‍ರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಬಾಬು ಸೇರಿದಂತೆ ಇಲಾಖೆಯ ಸಿಬಂದ್ದಿಗಳು ಉಪಸ್ಥಿತರಿದ್ದರು.