ಡಾ.ಬಾಬು ಜಗಜೀವನ್ ರಾಮ್‍ರವರ37ನೇ ಪುಣ್ಯಸ್ಮರಣೆ ಪ್ರಯುಕ್ತ ಪುಷ್ಪಾರ್ಚನೆ

ಕಲಬುರಗಿ.ಜು.06:ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಹÀಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್‍ರವರ 37ನೇ ಪುಣ್ಯಸ್ಮರಣೆ ಅಂಗವಾಗಿ ಕಲಬುರಗಿ ನಗರದ ಜಗತ್ ಸರ್ಕಲ್ ಟೌನ್ ಹಾಲ್ ಪಕ್ಕದಲ್ಲಿರುವ ಡಾ.ಬಾಬು ಜಗಜೀವ್ ರಾಮ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಬಿ ಫೌಜಿಯ ತರನ್ನುಮ್ ಅವರು ಗುರುವಾರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಕಲಬುರಗಿ ನಗರ ಪೆÇೀಲಿಸ್ ಆಯಕ್ತರಾದ ಚೇತನ ಆರ್, ಜಿಲ್ಲಾ ಪೆÇೀಲಿಸ್ ವರಿμÁ್ಠಧಿಕಾರಿ ಇಷಾ ಪಂತ್, ಜಿಲ್ಲಾ ಪಂಚಾಯತ ಸಿ.ಇ.ಓ. ಭನ್ವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತÀ ಭುವನೇಶ್ವರ ದೇವಿದಾಸ ಪಾಟೀಲ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕಿ ಪಿ.ಶುಭ ಸೇರಿದಂತೆ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ, ಮಾಳಗೆ, ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಜಿ. ಚಂದ್ರಿಕಾ ಪರಮೇಶ್ವರ ಸೇರಿದಂತೆ ವಿವಿಧ ಸಮಾಜದ ಮುಖಂಡರಾದ ಮಂಜುನಾಥ, ಗುರುಬಂಡಾರಿ, ಲೇಂಗಟೆ ಪರಮೇಶ್ವರ ಖಾನಾಪೂರ, ರಾಜುವಾಡೇಕರ, ರಾಜುಕಟ್ಟಿಮನಿ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.