ಡಾ. ಬಾಬು ಜಗಜೀವನ್ ರಾಮ್ ಹಸಿರು ಕ್ರಾಂತಿ ಹರಿಕಾರರು

????????????????????????????????????

ಚಾಮರಾಜನಗರ, ಏ.06: ಆಹಾರ ಕ್ಷೇತ್ರದಲ್ಲಿ ದೇಶವು ಸ್ವಾವಲಂಬನೆ ಸಾಧಿಸಲು ನೆರವಾ ಗಿದ್ದ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರು ದೇಶದ ಸಮಾನತೆಯ ಹರಿಕಾರರು ಆಗಿದ್ದರು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಎಂ. ಅಶ್ವಿನಿ ತಿಳಿಸಿದರು.
ನಗರದ ಜೆ. ಹೆಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್‍ರಾಮ್ ಅವರ 114 ನೇ ಜನ್ಮದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಅಸ್ಪøಶ್ಯತೆಯ ವಿರುದ್ಧ ಹೋರಾಟದಲ್ಲಿ ಮುಂಚೂಣಿ ನಾಯಕತ್ವ ವಹಿಸಿಕೊಂಡಿದ್ದ ಬಾಬೂಜೀಯವರು ದೇಶದಲ್ಲಿ ಸಮಾನತೆಯ ಮೂಲಕ ದೇಶ ಕಟ್ಟುವ ಕಾರ್ಯ ದಲ್ಲಿ ನಿರತರಾಗಿದ್ದರು. ಅಸಂಘಟಿತ ಕಾರ್ಮಿ ಕರ, ಭೂ ರಹಿತರ ಹಾಗೂ ಸಮಾಜದಲ್ಲಿ ತುಳಿತಕ್ಕೊಳಗಾದವರ ಪರವಾಗಿ ನಿಂತಿದ್ದರು ಎಂದರು.
ಬಾಬು ಜಗಜೀವನ್ ರಾಮ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದರು. ತಾರತಮ್ಯದಿಂದ ಕೂಡಿದ್ದ ಅಂದಿನ ಸಮಾಜವನ್ನು ಸರಿದಾರಿಗೆ ತರಲು ಪಣತೊಟ್ಟಿದ್ದ ಬಾಬೂಜೀ ಅವರ ವಿಚಾರಧಾರೆ. ತತ್ವ ಸಿದ್ದಾಂತ ಮೌಲ್ಯಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳುವುದರ ಮೂಲಕ ಇತರರಿಗೂ ಮಾದರಿಯಾಗಬೇಕು ಎಂದು ಅಶ್ವಿನಿ ತಿಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಬಿ. ಶಾಂತಮೂರ್ತಿ ಕುಲಗಾಣ ಅವರು ಮಾತನಾಡಿ ಜಗಜೀವನ್ ರಾಮ್ ಅವರು ಅಪ್ರತಿಮ ದೇಶಭಕ್ತರಾಗಿದ್ದರು. ದೇಶದಲ್ಲಿನ ದೀನದಲಿತರ, ದಮನಿತರ ಶ್ರೇಯೋಭಿವೃದ್ಧಿಗಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟಿದ್ದರು. ಹಸಿರು ಕ್ರಾಂತಿಯ ಮೂಲಕ ಅಖಂಡ ಭಾರತದ ಕೋಟ್ಯಾಂತರ ಜನರ ಹಸಿವನ್ನು ನೀಗಿಸಿದ ಜಗಜೀವನ್ ರಾಮ್ ಅವರು ಎಲ್ಲರಿಗೂ ಅನುಕರಣೀಯರಾಗಿದ್ದಾರೆ ಎಂದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯ ಭಾಷಣ ಮಾಡಿದ ಪಾಂಡಿಚೇರಿ ವಿಶ್ವವಿದ್ಯಾನಿಲಯದ ಡಿಪಾರ್ಟ್‍ಮೆಂಟ್ ಆಫ್ ಅಪ್ಲೈಡ್ ಸೈಕಾಲಜಿ ವಿಭಾಗ ಮುಖ್ಯಸ್ಥರಾದ ಪ್ರೊ. ರಂಗಯ್ಯ ಅವರು, ಬಾಬು ಜಗಜೀವನ್‍ರಾಮ್ ಅವರ ಜಯಂತಿಯನ್ನು ಸಮತಾ ದಿನವನ್ನಾಗಿ ಇಂದು ದೇಶದೆಲ್ಲೆಡೆ ಆಚರಿಸಲಾಗುತ್ತಿದೆ. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಿಸಲು ಹೋರಾಡಿದ ಮಹಾನ್ ಚೇತನ ಜಗಜೀವನ್ ರಾಮ್ ಆಗಿದ್ದರು ಎಂದರು.
ಕಾರ್ಯಕ್ರಮದ ಆರಂಭದಲ್ಲಿ ಗಣ್ಯರು ಡಾ|| ಬಾಬುಜಗಜೀವನ್‍ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.