ಡಾ.ಬಾಬು ಜಗನ್‍ಜೀವನ್‍ರಾಂ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ


ಬಳ್ಳಾರಿ,ಏ.6- ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರರಾದ ಡಾ.ಬಾಬು ಜಗಜೀವನ ರಾಂ ರವರ 116ನೇ ಜಯಂತಿ ಅಂಗವಾಗಿ ಡಾ.ಬಾಬು ಜಗನ್‍ಜೀವನ್‍ರಾಂ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಪುಷ್ಪ ನಮನ ಸಲ್ಲಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಜಿಲ್ಲಾ ಕ್ರೀಡಾಂಗಣ ಹತ್ತಿರ ನಲ್ಲಚೇರುವು ಪ್ರದೇಶದಲ್ಲಿರುವ ಡಾ.ಬಾಬು ಜಗನ್‍ಜೀವನ್‍ರಾಂ ಭವನದಲ್ಲಿ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‍ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್, ಸಹಾಯಕ ನಿರ್ದೇಶಕ ಶಾಷು ಸೇರಿದಂತೆ ಇತರರು ಇದ್ದರು.