
ಸಂಜೆವಾಣಿ ವಾರ್ತೆ
ಕಾರಟಗಿ :ಏ:14: ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮ ಹೆಮ್ಮೆಯ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಆದರ್ಶ ಎಲ್ಲರ ಜೀವನಕ್ಕೆ ದಾರಿ ದೀಪವಾಗಿದೆ. ಬಾಬಾ ಸಾಹೇಬರ ಚಿಂತೆನೆಗಳು ಇಂದಿಗೂ ಯುವಜನೆತೆಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ತಾ.ಪಂ ಇಒ ನರಸಪ್ಪ ಎನ್. ಅವರು ಹೇಳಿದರು.
ಪಟ್ಟಣದ ನವಲಿ ರಸ್ತೆಯ ತಾಲೂಕು ಪಂಚಾಯತ ಕಚೇರಿಯಲ್ಲಿ ಶುಕ್ರವಾರದಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ರವರ ಭಾವಚಿತ್ರಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಿ ಮಾತನಾಡಿದರು.
ಪ್ರತಿ ವರ್ಷ ಏಪ್ರಿಲ್ 14 ರಂದು ಭಾರತದ ಸಂವಿಧಾನ ಶಿಲ್ಪಿ, ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್. ನಮ್ಮ ಜೀವನದಲ್ಲಿ ಬಾಬಾ ಸಾಹೇಬ್ ರವರ ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕರಾದ ವೈ.ವನಜಾ, ಯೋಜನಾಧಿಕಾರಿ ರಾಘವೇಂದ್ರ. ಜಿ, ವಿವಿಧ ಯೋಜನೆಗಳ ವಿಷಯ ನಿರ್ವಾಹಕರಾದ ಮಂಜುನಾಥ ಭಜಂತ್ರಿ, ದುರಗಪ್ಪ ಭಜಂತ್ರಿ, ಸಿಬ್ಬಂದಿ ರಾಜಸಾಬ್ ಇದ್ದರು.