ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿ ಅರ್ಥಪೂರ್ಣ ಆಚರಣೆಗೆ ತೀರ್ಮಾನ

ಚಾಮರಾಜನಗರ, ಏ.04- ಜಿಲ್ಲಾಡಳಿತದ ವತಿಯಿಂದ ಏಪ್ರಿಲ್ 5 ರಂದು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಹಾಗೂ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯನ್ನು ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲು ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಮಾತನಾಡಿ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏಪ್ರಿಲ್ 5 ರಂದು ಡಾ. ಬಾಬು ಜಗಜೀವನ್ ರಾಮ್ ಜಯಂತಿ ಹಾಗೂ ಏಪ್ರಿಲ್ 14 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಸರಳವಾಗಿ, ಸಾಂಕೇತಿಕವಾಗಿ ಆಚರಣೆ ಮಾಡಲಾಗುವುದು. ಏಪ್ರಿಲ್ 5 ರಂದು ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಬಾಬೂಜಿ ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸಿ ಜಯಂತಿ ಆಚರಿಸಲಾಗುವುದು. ಏಪ್ರಿಲ್ 14 ರಂದು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾರ್ಲಾಪಣೆ ಮಾಡಿ ನಂತರ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದರು.
ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ ಚುನಾವಣೆ ಬಳಿಕ ಡಾ. ಬಿ.ಆರ್. ಅಂಬೇಡ್ಕರ್‍ಅವರಹಾಗೂ ಬಾಬೂಜಿಅವರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಬೇಕು. ಈ ಸಂಬಂಧ ವಿವಿಧ ಸಮಿತಿಗಳಿಗೆ ಜವಾಬ್ದಾರಿ ನೀಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ, ಗ್ರಾಮ ಪಂಚಾಯಿತಿಗಳಲ್ಲಿ ಮಹನೀಯರ ಜಯಂತಿ ಆಚರಣೆ ಮಾಡಬೇಕುಎಂಬುದೂ ಸೇರಿದಂತೆ ಆಯೋಜನೆ ಸಂಬಂಧ ಇತರೆ ಸಲಹೆಗಳನ್ನು ನೀಡಿದರು.
ಜಿಲ್ಲಾಧಿಕಾರಿ ಮಾತನಾಡಿ ಈ ಸಂಬಂಧ ಸಮಿತಿಗಳಿಗೆ ಸೂಚನೆ ನೀಡಲಾಗುವುದು. ಚುನಾವಣೆ ಮುಗಿದ ಬಳಿಕ ಇಬ್ಬರು ಮಹನೀಯರ ಜಯಂತಿಯನ್ನು ಒಂದೇ ದಿನ ಆಚರಣೆ ಮಾಡಲು ಮುಂದಾಗಿ ಎಂದು ಸಲಹೆ ನೀಡಿದರು.
ಜಿಲ್ಲಾ ಪೆÇಲೀಸ್ ವರಿμÁ್ಟಧಿಕಾರಿ ಪದ್ಮಿನಿ ಸಾಹು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕ ಮಲ್ಲಿಕಾರ್ಜುನ್, ಮುಖಂಡರಾದ ಸಿ.ಎಂ.ಕೃಷ್ಣಮೂರ್ತಿ, ಕೆ.ಎಂ. ನಾಗರಾಜು, ಸಿ.ಕೆ. ರವಿಕುಮಾರ್, ಸಿ.ಕೆ. ಮಂಜುನಾಥ್, ಆರ್.ಎಂ. ಕಾಂತರಾಜು, ರಾಮಸಮುದ್ರ ನಾಗರಾಜು, ಬಸವನಪುರ ರಾಜಶೇಖರ್, ಚಾ.ರಂ. ಶ್ರೀನಿವಾಸಗೌಡ, ಚಾ.ಗು. ನಾಗರಾಜು, ಯರಿಯೂರು ರಾಜಣ್ಣ, ಬ್ಯಾಡಮೂಡ್ಲು ಬಸವಣ್ಣ, ಶಂಕರ್, ಮಹದೇವಯ್ಯ, ಸಂಘಸೇನಾ, ನಾಗೇಶ್, ಶಿವಣ್ಣ, ಸಿ.ಎಂ. ನರಸಿಂಹಮೂರ್ತಿ, ನಾರಾಯಣ, ಜಿ. ಬಂಗಾರು, ಗು. ಪುರುಷೋತ್ತಮ್, ಮಹದೇವಸ್ವಾಮಿ, ಪಣ್ಯದಹುಂಡಿರಾಜು, ಮಹೇಶ್, ನಟರಾಜು, ಕಂದಹಳ್ಳಿ ನಾರಾಯಣ ಸೇರಿದಂತೆ ಇತರೆ ಮುಖಂಡರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.