ಭಾಲ್ಕಿ:ಮಾ.25: ಕರ್ನಾಟಕ ಏಕೀಕರಣದ ರೂವಾರಿ, ಡಾ.ಚನ್ನಬಸವ ಪಟ್ಟದ್ದೇವರ ಪರಮ ಶಿಷ್ಯರು ಆಗಿರುವ ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ ಅವರಿಗೆ ಶಬನಮ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್‍ನ ವತಿಯಿಂದ 2023ನೇ ಸಾಲಿನ ಮರುಳ ಶಂಕರದೇವ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪಟ್ಟಣದ ಶಾಸಕರ ನಿವಾಸದಲ್ಲಿ ಈಚೆಗೆ ಶಬನಮ್ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷೆ ಡಾ.ಎಂ.ಮಕ್ತುಂಬಿ ಪ್ರಶಸ್ತಿ ಪ್ರದಾನ ಮಾಡಿ, ಗಡಿ ಭಾಗದಲ್ಲಿ ಶೈಕ್ಷಣಿಕ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಡಾ.ಭೀಮಣ್ಣ ಖಂಡ್ರೆ ಅದ್ಭುತ ಸಾಧನೆ ಮಾಡಿದ್ದಾರೆ.
ಅವರ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಿ ನಮ್ಮ ಸಂಸ್ಥೆಯಿಂದ ಅಳಿಲು ಸೇವೆ ಸಲ್ಲಿಸುವ ಪ್ರಯತ್ನ ಮಾಡಿದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಡಾ.ಗೀತಾ ಈಶ್ವರ ಖಂಡ್ರೆ, ಅನಿತಾ ಪಾಟೀಲ್, ಮಹೇಬೂಬಿ, ತ್ರೀನಾಥ ಬಾಬು, ಶಬನಮ್, ಸೋಹೆಲ್ ಇದ್ದರು.