ಡಾ ರಾಜ್‍ಕುಮಾರ ಅವರ ಜನ್ಮದಿನಾಚರಣೆ

ಗದಗ ಏ25 : ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ನಟಸಾರ್ವಭೌಮ, ಮೇರುನಟ, ಪದ್ಮವಿಭೂಷಣ, ದಾದಾ ಸಾಹೇಬ ಫಾಲ್ಕೆ ಪ್ರಶಸ್ತಿ ಪುರಸ್ಕೃತರಾದ ಡಾ.ರಾಜ್‍ಕುಮಾರವರ ಜನ್ಮ ದಿನಾಚರಣೆಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ರಾಜ್ಯದ ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಕರ್ನಾಟಕ ರತ್ನ, ವರನಟ ಡಾ. ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಮರ್ಪಿಸಿ ಗೌರವ ಸಲ್ಲಿಸಿ ಡಾ. ರಾಜಕುಮಾರ್ ಅವರ ಜಯಂತಿಯ ಶುಭಾಶಯ ಕೋರಿದರು. ಕನ್ನಡಿಗರ ಕಣ್ಮಣಿ ಡಾ. ರಾಜಕುಮಾರ್ ಅವರ ಚಲನಚಿತ್ರಗಳ ಪಾತ್ರಗಳ ಮೂಲಕ ಸಮಾಜಕ್ಕೆ ನೀಡಿದ ಸಂದೇಶಗಳು ಹಾಗೂ ಅವರ ಕನ್ನಡಾಭಿಮಾನ ಎಲ್ಲರಿಗೂ ಸದಾಕಾಲ ಮಾದರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ, ಜಿಲ್ಲಾ ಪೆÇಲೀಸ ವರಿಷ್ಟಾಧಿಕಾರಿ ಯತೀಶ್ ಎನ್, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರಿಗಿಡದ, ಡಿ.ಎಸ್.ಓ. ಜಗದೀಶ ನುಚ್ಚಿನ , ಗದಗ ಬೆಟಗೇರಿ ನಗರ ಸಭೆ ಪೌರಾಯುಕ್ತ ರಮೇಶ ಜಾಧವ , ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಮತ್ತಿತರ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.