ಬೆಂಗಳೂರು, ಜೂ.೧೩- ಚಂದನವನದಲ್ಲಿ ಡಾ.ರಾಜ್‌ಕಪ್ ೬ನೇ ಆವೃತ್ತಿಗೆ ಮತ್ತೆ ಆರಂಭ ದಿನಗಣನೆ ಆರಂಭವಾಗಿದ್ದು ಈ ಬಾರಿ ೬ ದೇಶದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಅದರ ಪೂರ್ವಬಾಗಿಯಾಗಿ ಇದೇ ೧೭ ರಂದು ದುಬೈನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.
ಪುನೀತ್ ರಾಜ್ ಕುಮಾರ್ ಅವರ ಸ್ಮಾರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದ್ದು, ದುಬೈನಲ್ಲಿ ನಡೆಯುವ ಹರಾಜು ಪ್ರಕ್ರಿಯೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ರಾಜ್ ಕಪ್ ಆಯೋಜಕ ರಾಜೇಶ್ ಬ್ರಹ್ಮಾವರ ತಿಳಿಸಿದ್ದಾರೆ.
ಕಳೆದ ಬಾರಿ ೮ ತಂಡ ಇತ್ತು. ಈ ಬಾರಿ ೧೨ ತಂಡಗಳಾಗಿವೆ. ೧೦೦೦ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ೧೨ ತಂಡಗಳಿಗೆ ೧೨ ಕ್ಯಾಪ್ಟನ್, ೧೨ ವೈಸ್ ಕ್ಯಾಪ್ಟನ್, ಸ್ಟಾರ್ ಕ್ಯಾಪ್ಟನ್ ಇರಲಿದ್ದಾರೆ ಎಂದರು.
ರಾಜ್ ಕಪ್ ಸೀಸನ್ ೬ನ್ನು ಆರು ದೇಶಗಳಲ್ಲಿ ನಡೆಸುವ ಉದ್ದೇಶವಿದೆ. ಶ್ರೀಲಂಕಾ, ಸಿಂಗಾಪುರ್, ಮಲೇಷ್ಯಾ, ಬ್ಯಾಂಕಾಕ್ ಮತ್ತು ದುಬೈನಲ್ಲಿ ಪಂದ್ಯ ನಡೆಯಲಿವೆ. ಇನ್ನೊಂದು ದೇಶ ಬಾಕಿ ಉಳಿದಿದೆ ಎಂದು ಹೇಳಿದರು.
ನಟ ಅನಿರುದ್ಧ್ ಮಾತನಾಡಿ, ಡಾ.ರಾಜ್ ಕಪ್ ಹೆಸರಲ್ಲೇ ಸಕಾರಾತ್ಮಕತೆ ಇದೆ.ಮಹಾನ್ ಕಲಾವಿದರಿಗೆ ಅವರ ಹೆಸರಲ್ಲಿ ಸ್ಮಾರಣಾರ್ಥವಾಗಿ ಕ್ರಿಕೆಟ್ ಪಂದ್ಯಾವಳಿ ಆಡುತ್ತಿರುವುದು ನಿಜಕ್ಕೂ ಸಂತೋಷ. ಕ್ರಿಕೆಟ್ ಅನ್ನುವುದು ನಿಮಿತ್ತ ಅಷ್ಟೇ. ಕನ್ನಡ ಚಿತ್ರರಂಗದ ಒಗ್ಗಟ್ಟಾಗಿದ್ದೇವೆ.ಪಂದ್ಯಾವಳಿ ಯಶಸ್ವಿಯಾಗಲಿ ಎಂದರು.
ಈ ಆವೃತ್ತಿಯಲ್ಲಿ ೧೨ ತಂಡಗಳು ಭಾಗಿಯಾಗಲಿವೆ. ಡಾಲಿ ಧನಂಜಯ್, ಅನಿರುದ್ದ್, ಡಾರ್ಲಿಂಗ್ ಕೃಷ್ಣ , ಅಭಿಷೇಕ್ ಅಂಬರೀಶ್, ನೀನಾಸಂ ಸತೀಶ್, ಲೂಸ್ ಮಾದ ಯೋಗಿ, ವಶಿಷ್ಠ ಸಿಂಹ, ಪ್ರಜ್ವಲ್, ಕೋಮಲ್, ಶ್ರೀನಗರ ಕಿಟ್ಟಿ, ರಾಜುಗೌಡ ನೇತೃತ್ವದ ತಂಡಗಳು ಪಾಲ್ಗೊಳ್ಳಲಿವೆ.
ಇನ್ನು, ರಾಜ್ ಕಪ್ ಸೀಸನ್ ೬ರ ಲೀಗ್ ಮ್ಯಾಚ್ ಗಳು ವಿದೇಶದಲ್ಲಿ ನಡೆಯಲಿದೆ. ಈ ಬಾರಿ ಲೀಗ್ ಪಂದ್ಯಗಳು ಶ್ರೀಲಂಕಾ, ಸಿಂಗಾಪುರ್, ಮಲೇಷ್ಯಾ ಬ್ಯಾಂಕಾಕ್ ಮತ್ತು ದುಬೈನಲ್ಲಿ ನಡೆಯಲಿವೆ. ಈ ಮಹತ್ವದ ರಾಜ್ ಕಫ್ ಟೂರ್ನಿಗಾಗಿ ಸ್ಯಾಂಡಲ್ ವುಡ್ ತಾರೆಯರು, ತಂತ್ರಜ್ಞರ, ರಾಜಕೀಯ, ಮಾಧ್ಯಮದವರು ಭಾಗಿಯಾಗಲಿದ್ದಾರೆ ಎಂದರು.
ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ, ಸಿಂಪಲ್ ಸುನಿ, ರವಿಶಂಕರ್ ಗೌಡ, ಜೇಮ್ಸ್ ಚೇತನ್, ಪವನ್ ಒಡೆಯರ್ ಅವರು ರಾಜ್‌ಕಪ್ ಕುರಿತು ಮಾಹಿತಿ ಹಂಚಿಕೊಂಡರು