ಡಾ. ರಾಜ್ ಜಯಂತಿ ಸರಳ ಆಚರಣೆ

ರಾಯಚೂರು,ಏ.೨೫-ಕೋವಿಡ್-೧೯ ಸೋಂಕು ಹಾಗೂ ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ ಕನ್ನಡದ ಮೇರು ನಟ ಡಾ. ರಾಜ್ ಕುಮಾರ್ ಅವರ ಜಯಂತಿಯನ್ನು ಇದೇ ಏ.೨೪ರ ಶುಕ್ರವಾರ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ನಗರದ ಪತ್ರಿಕಾ ಭವನದ ಮೊದಲ ಮಹಡಿಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ವರ ನಟರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ, ಗೌರವ ಸಮರ್ಪಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್.ಜಿ, ಡಾ. ರಾಜ್ ಅಭಿಮಾನಿ ಬಳಗದ ಪ್ರಧಾನ ಕಾರ್ಯದರ್ಶಿ ಬಸವರಾಜ್, ರಾಜ್ ಕುಮಾರ್ ಸದ್ಭಾವನ ಪ್ರಶಸ್ತಿ ಪುರಸ್ಕೃತ ದಂಡಪ್ಪ ಬೀರಾದರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿನಿ ಚಾಲಕ ಪ್ರಕಾಶ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.