
ಸೇಡಂ, ಮೇ,17: ಸೇಡಂ ರಾಜಕೀಯದಲಿಯೇ ಈ ಬಾರಿ ಅತಿ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ ಅಭಿವೃದ್ಧಿ ಹರಿಕಾರ ಡಾ.ಶರಣಪ್ರಕಾಶ್ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಎನ್ ಎಸ್.ಯು.ಐ ತಾಲೂಕ ಪ್ರಧಾನ ಕಾರ್ಯದರ್ಶಿಯಾದ ಶಿವಕುಮಾರ ಎಮ್ ಸುತಾರ್ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು ಈ ಹಿಂದೆ ಹಲವು ಭಾಗ್ಯಗಳ ಯೋಜನೆಯನ್ನು ಜಾರಿಗೆ ತರುವ ಮೂಲಕ ಸರ್ವ ಜನಾಂಗದ ಶಾಂತಿಯ ಹಿತ ಬಯಸಿದ ನಾಯಕ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಸರ್ಕಾರದಲ್ಲಿ ಒಳ್ಳೆಯ ಸಚಿವರಾಗಿ ಕೆಲಸ ಮಾಡಿದ್ದು ಕಲಬುರ್ಗಿ ಜಿಲ್ಲೆಯ ಉಸ್ತುವಾರಿಯಾಗಿ ಕೂಡಾ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಅವರು ಅಭಿವೃದ್ದಿ ಹರಿಕಾರರು ಎಂದೇ ಖ್ಯಾತಿ ಪಡೆದಿದ್ದಾರೆ, ಅದಕ್ಕಾಗಿ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕೆಂದು ಸುತಾರ್ ಒತ್ತಾಯಿಸಿದ್ದಾರೆ.