
ಸಂಜೆವಾಣಿ ವಾರ್ತೆ
ದಾವಣಗೆರೆ.ಆ.೨೦: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆ ಮಹಾಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಫ್ತು ಶ್ರೇಷ್ಠತಾ ಪ್ರಶಸ್ತಿಯನ್ನು ಮುಧೋಳ್ ಐಸಿಪಿಯಲ್ ಚೇರ್ಮನ್‌ರಾದ ಡಾ. ಶಾಮನೂರು ಶಿವಶಂಕರಪ್ಪನವರಿಗೆ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್ ಅವರು ಹಾಗೂ ಮಹಾ ಸಂಸ್ಥೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಬಿ.ವಿ.ಗೋಪಾಲರೆಡ್ಡಿ, ಉಮಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.