ಡಾ.ಹಳಕಟ್ಟಿಇಂಜನಿಯರಿಂಗ್ ಕಾಲೇಜು ಮೂವರು ವಿದ್ಯಾರ್ಥಿಗಳು ರ್ಯಾಂಕ್

ವಿಜಯಪುರ, ಏ.6-ವಿಜಯಪುರ 5. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 2019-20ನೇ ಸಾಲಿನ ಪರೀಕ್ಷೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಇಂಜನಿಯರಿಂಗ್ ಕಾಲೇಜಿಗೆ ಮೂವರು ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದಾರೆ ಎಂದು ಪ್ರಾಚಾರ್ಯ ಡಾ.ಅತುಲ್ ಆಯಿರೆ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು ಎಲೇಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಹೃಷಿಕೇಶ ಗೋಖಲೆ ತೃತೀಯ ಸ್ಥಾನ, ಆಟೋಮೊಬೈಲ್ ವಿಭಾಗದಲ್ಲಿ
ಸಂದೀಪ ಕದಂ 7ನೇ ಸ್ಥಾನ ಮತ್ತು ಆರ್ಕಿಟೆಕ್ಚರ್ ವಿಭಾಗದಲ್ಲಿ ಶ್ರೇಯಾ ದೇಸಾಯಿ 8ನೇ ಸ್ಥಾನ ಪಡೆದು, ಕಾಲೇಜಿಗೆ ಹಾಗೂ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಆಡಳಿತ ಮಂಡಳಿ ಹಾಗೂ ಕಾಲೇಜು ಸಿಬ್ಬಂದಿ ಅಭಿನಂದಿಸಿದ್ದಾರೆ