ಡಾ. ಹೇಮಾವತಿ ಹೆಗ್ಗಡೆಯವರ ಆದರ್ಶ ಸಮಾಜಕ್ಕೆ ಮಾದರಿ 

 ಹಿರಿಯೂರು.ಜು.27- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲ್ಲೂಕಿನ ಧರ್ಮಪುರ ವಲಯದ ಪಿ ಡಿ ಕೋಟೆ ಹೋಬಳಿಯಲ್ಲಿ ಶ್ರೀಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿತ್ತು  ಕಾರ್ಯಕ್ರಮಕ್ಕೆ  ಯೋಜನೆಯ ಜಿಲ್ಲಾ ನಿರ್ದೇಶಕರಾದ  ವಿನಯಕುಮಾರ್ ಸುವರ್ಣ ಅವರು ದೀಪ ಬೆಳಗಿಸುವುದರ ಮೂಲಕ   ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಹಿಳೆಯರನ್ನು ಸಬಲೀಕರಣ ಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರ ಕಾರ್ಯ ಶ್ಲಾಘನೀಯ, ಮಾತೃಶ್ರೀ ಅವರು ಇಡೀ ಸಮಾಜಕ್ಕೆ ಮಾದರಿಯಾಗಿದ್ದು ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪುಟ್ಟಸ್ವಾಮಿಗೌಡ  ವಹಿಸಿದ್ದರು ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ  ಹರಿ ಪ್ರಸಾದ್ ರೈ,  ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ಹಾಗೂ ಕೇಂದ್ರದ ಸದಸ್ಯರು ವಲಯದ ಮೇಲ್ವಿಚಾರಕರಾದ ಪ್ರಕಾಶ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಲಕ್ಷ್ಮಿ ಸೇವಾ ಪ್ರತಿನಿಧಿ ಹಾಗೂ  ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Attachments area