ಡಿಕೆಶಿಗೆ ಜಮೀರ್ ಟಾಂಗ್

ಬೆಳಗಾವಿ, ಜು. ೨೩- ಎಲ್ಲರೂ ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್, ಸಿಎಂ ವಿಚಾರ ಶುರು ಮಾಡಿದ್ದೇ ಡಿ.ಕೆ.ಶಿವಕುಮಾರ್, ಒಕ್ಕಲಿಗ ಸಮುದಾಯದ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಅವರು ನನಗೆ ಅವಕಾಶ ಕೊಡಿ ಅಂತ ಅವರೇ ಹೇಳಿದ್ದಾರೆ.
ಸಿಎಂ ಸ್ಥಾನದ ರೇಸ್ ಗೆ ಚಾಲನೆ ಕೊಟ್ಟಿದ್ದೆ ಅವರು, ಅವರೇ ಮಾತನಾಡಿದ ಮೇಲೆ ನಾವೆಲ್ಲಾ ಮಾತನಾಡಿದ್ದು, ಸಿಎಂ ಯಾರು ಆಗಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಸಿಎಂ ಬಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಿರ್ಧಾರ ಕೈಗೊಳ್ಳುತ್ತಾರೆ. ಸಿದ್ದರಾಮಯ್ಯ ಸಿಎಂ ಆಗಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಟಾಂಗ್ ಕೊಟ್ಟಿದ್ದಾರೆ.