ಡಿಕೆಶಿ ಮುಗಿಸಲು ಬಿಜೆಪಿ ಪ್ರಯತ್‍ನ: ಸಚಿವ ತಂಗಡಗಿ

ಸಂಜೆವಾಣಿ ನ್ಯೂಸ್
ಮೈಸೂರು: ಜ.03:- ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಸಿಬಿಐ, ಇಡಿ ಸಂಸ್ಥೆಗಳನ್ನು ಸ್ವಂತ ಆಸ್ತಿಯಾಗಿ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ವಿರುದ್ಧದ ಪ್ರಕರಣವನ್ನು ಕಾನೂನಾತ್ಮಕವಾಗಿ ವಾಪಸ್ ಪಡೆದಿದ್ದರೂ, ಮತ್ತೊಮ್ಮೆ ಹೆದರಿಸುವ ಕೆಲಸ ಮಾಡುತ್ತಿದ್ದಾರೆ.
ಆ ಮೂಲಕ ಬಿಜೆಪಿ ವಿರುದ್ಧ ಟೀಕೆ ಮಾಡುವವರ ಬಗ್ಗೆ, ಪ್ರಭಾವಿಗಳ ಬಗ್ಗೆ ದ್ವೇಷದ ರಾಜಕೀಯ ಮಾಡಲಾಗುತ್ತಿದೆ. ಅಂತಹವರನ್ನು ಟಾರ್ಗೆಟ್ ಮಾಡಿ ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.
ಬಿಜೆಪಿಗರ ಮೇಲೆ ಕೇಸ್ ಹಾಕುತ್ತಿಲ್ಲ:
ಭ್ರಷ್ಟಾಚಾರ, ಸುಳ್ಳು ಹೇಳೋದೆ ಬಿಜೆಪಿ ಅಜೆಂಡಾ ಆಗಿದೆ. ಜನರ ಧಾರ್ಮಿಕ ಭಾವನೆಗಳ ಜೊತೆ ಆಟ ಆಡುತ್ತಿದ್ದಾರೆ. ಭಾವನಾತ್ಮಕ ವಿಚಾರಗಳನ್ನು ಜನರ ಮೇಲೆ ಹೇರಿ ಜನರನ್ನು ದಿಕ್ಕು ತಪ್ಪಿಸುವುದೇ ಬಿಜೆಪಿ ಅಜೆಂಡಾ. ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವರಿಗೆ ಚಿಂತನೆ ಇಲ್ಲ ಎಂದು ಟೀಕಿಸಿದರು.
ಕಾನೂನಿನ ವಿರುದ್ಧ ಹೋಗಬಾರದು:
ಕನ್ನಡಪರ ಹೋರಾಟಗಾರರ ಬಂಧನ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕನ್ನಡ, ನಾಡು, ನುಡಿ ಜಲದ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ. ಆದರೆ, ಕಾನೂನನ್ನು ಕೈಗೆ ತೆಗೆದುಕೊಳ್ಳುವುದು ಸರಿಯಲ್ಲ. ಸರ್ಕಾರ ಈಗಾಗಲೇ 60:40ರ ಅನುಪಾತದಡಿಯಲ್ಲಿ ಕನ್ನಡ ಬಳಕೆಗೆ ನಿರ್ದೇಶನ ನೀಡಿದೆ. ಅದನ್ನು ತಪ್ಪದೇ ಪಾಲನೆ ಮಾಡಬೇಕು. ಕಾನೂನಿನ ಮುಂದೆ ನಾವು, ನೀವು ಎಲ್ಲರೂ ಒಂದೇ ಎಂದರು.
ಸರ್ಕಾರಿ ಶಾಲೆ ಮುಚ್ಚಲ್ಲ:
ರಾಜ್ಯದ ಗಡಿ ಭಾಗದಲ್ಲಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಈಗಾಗಲೇ ಕೇರಳ ಗಡಿ ಭಾಗಕ್ಕೆ ಭೇಟಿ ಕೊಟ್ಟು ಬಂದಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮವಹಿಸುತ್ತೇವೆ ಎಂದ ಅವರು, ರಂಗಾಯಣದ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಶೀಘ್ರದಲ್ಲೇ ನಡೆಯಲಿದ್ದು, ಸದ್ಯಕ್ಕೆ ನಾನೇ ಅದರ ನಿರ್ದೇಶಕ, ಅಧ್ಯಕ್ಷ ಎಲ್ಲವೂ ಆಗಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕ್ರಮ:
ಕಲ್ಲಡ್ಕ ಪ್ರಭಾಕರ ಭಟ್ ಮೇಲಿಂದ ಇಳಿದು ಬಂದಿಲ್ಲ, ಅವರ ಮೇಲೂ ಕ್ರಮ ತೆಗೆದುಕೊಳ್ಳುವ ಕೆಲಸ ಆಗುತ್ತಿದೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯಾರನ್ನೂ ಪೆÇೀಷಣೆ, ರಕ್ಷಣೆ ಮಾಡುವ ಮಾತೇ ಇಲ್ಲ. ಹೀಗಾಗಿ ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿದ್ದರೂ ಅವರನ್ನು ಬಂಧಿಸಲು ಸರ್ಕಾರ ವಿಫಲವಾಯಿತೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಸಚಿವ ಶಿವರಾಜ್ ತಂಗಡಗಿ ಪ್ರತಿಕ್ರಿಯೆ ನೀಡಿದರು.