ಡಿಕೆಶಿ ವಿರುದ್ಧ ರಮೇಶ್ ಬೆಂಬಲಿಗರ ಆಕ್ರೋಶ, ಕಲ್ಲು ತೂರಾಟ

ಬೆಳಗಾವಿ,ಮಾ.28- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ರಮೇಶ ಜಾರಕಿಹೊಳಿ ಬೆಂಬಲಿಗರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿ, ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಮಾನ ನಿಲ್ದಾಣದಿಂದ ಡಿ.ಕೆ.ಶಿವಕುಮಾರ್ ತೆರಳುತ್ತಿದ್ದಂತೆಯೇ ಡಿಕೆಶಿ ಎಸ್ಕಾರ್ಟ್ ವಾಹನಗಳ ಮೇಲೆ ಹಗೂ ಡಿಕೆಶಿ ಕಾರಿನನ ಮೇಲೆ ಕಲ್ಲು ತೂರಾಟ ನಡೆಸಿ, ಚಪ್ಪಲಿ ಎಸೆದ ಘಟನೆಯೂ ನಡೆಯಿತು. ಡಿಕೆಶಿ ವಿರುದ್ಧ ಘೋಷಣೆ ಕೂಗಿದರು.
ಡಿಕೆ ಶಿವಕುಮಾರ್ ಬೆಂಬಲಿಗರ ವಾಹನಗಳ ಮೇಲೂ ಕಲ್ಲು ತೂರಾಟ ನಡೆಸಲಾಯಿತು. ಕಾರಿನ ಗಾಜುಗಳು ಪುಡಿಪುಡಿಯಾಗಿವೆ. ಸಾಂಬ್ರಾ ಗ್ರಾಮದ ಗೇಟ್ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.