ಡಿಕೆಶಿ-ಸಿದ್ದುಗೆ ಬಿಜೆಪಿ ಟಾಂಗ್

ಬೆಂಗಳೂರು,ಸೆ.೨೦- ಬಿಜೆಪಿ ಮತ್ತು ಕಾಂಗ್ರೆಸ್ ನಡುವಣ ಸಮರ ಮುಂದುವರೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರಿಗೆ ಬಿಜೆಪಿ ಟಾಂಗ್ ನೀಡಿದೆ.
ಒಂದೆಡೆ ಇಡಿ ವಿಚಾರಣೆ ಎದುರಿಸುತ್ತಿರುವ ಡಿ.ಕೆ ಶಿವಕುಮಾರ್, ಮತ್ತೊಂದೆಡೆ ಸದನದಲ್ಲಿ ಭ್ರಷ್ಟಾಚಾರ ವಿಚಾರದಲ್ಲಿ ಸಿದ್ದರಾಮಯ್ಯ ಮುಜುಗರಕ್ಕೊಳಗಾಗಿದ್ದಾರೆ. ಹೀಗಾಗಿ, ರಾಜ್ಯದ ಜನರ ಮುಂದೆ ಇವರಿಬ್ಬರ ನಾಟಕಕ್ಕೆ ತೆರೆ ಬಿದ್ದಿದೆ ಎಂದು ಟ್ವಿಟ್ಟರ್‌ನಲ್ಲಿ ಬಿಜೆಪಿ ವ್ಯಂಗ್ಯವಾಡಿದೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷರೇ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇವರಿಬ್ಬರು ಕಾಂಗ್ರೆಸ್ ಪಕ್ಷಕ್ಕೆ ಭ್ರಷ್ಟಾಚಾರದ ಮೂಲಕ ಘನತೆ ಹೆಚ್ಚಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಲೇವಡಿ ಮಾಡಿದೆ.