ಡಿಕೆಶಿ, ಸಿದ್ದುರನ್ನು ಸಿಎಂ ಆಗಲು ಬಿಡಲ್ಲ:ಬಿಎಸ್ ವೈ ಗುಡುಗು

ಶಿವಮೊಗ್ಗ, ಜು. 22-ತಾವು ಇರುವ ತನಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ ಎಂದು ಮಾಜಿ‌ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಗುಡುಗಿದ್ದಾರೆ.
ಅಂಬ್ಲಿಗೋಳ ಜಲಾಶಯಕ್ಕೆ ಇಂದು ಬಾಗಿನ ಅರ್ಪಿಸಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಪಕ್ಷದ ನಾಯಕರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡುತ್ತೇನೆ ಎಂದು ಹೇಳಿದರು.
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಪ್ಪನಾಣೆಗೂ ನೀವು ಮುಖ್ಯಮಂತ್ರಿ ಯಾಗುವುದಿಲ್ಲ. ಬಿಜೆಪಿಯವರೇ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನನ್ನ ಕೈ ಕಾಲು ಗಟ್ಟಿ ಇದೆ.ಇನ್ನೊಂದು ವರ್ಷಗಳ ಕಾಲ ರಾಜ್ಯಾದ್ಯಂತ ಪ್ರವಾಸ ಮಾಡಿ, ಮತ್ತೊಮ್ಮೆ ಭಾರತೀಯ ಜನತಾ ಪಾರ್ಟಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದು ತಿಳಿಸಿದರು.