ಡಿವಿಎಸ್ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು, ಜ. ೪- ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.ನಗರದ ಹೆಬ್ಬಾಳದಲ್ಲಿರುವ ಖಾಸಗಿ ಆಸ್ಪತ್ರೆಗೆ ಕೇಂದ್ರ ಸಚಿವ ಸದಾನಂದ ಗೌಡರು ನಿನ್ನೆ ದಾಖಲಾಗಿದ್ದರು.ಇಂದು ಬೆಳಿಗ್ಗೆಯೇ ಮುಖ್ಯಮಂತ್ರಿ ಯಡಿಯೂರಪ್ಪನವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ
ವಿಚಾರಿಸಿ ಚೇತರಿಕೆಗೆ ಹಾರೈಸಿದರು.
ಲೋ ಶುಗರ್‌ನಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸದಾನಂದ ಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಾಳೆ ಅವರು
ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.
ಶಿವಮೊಗ್ಗದಲ್ಲಿ ನಿನ್ನೆ ನಡೆದ ಬಿಜೆಪಿಯ ವಿಶೇ? ಸಭೆಯಲ್ಲಿ ಪಾಲ್ಗೊಂಡು ಸದಾನಂದಗೌಡ ಅವರು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಲೋಶುಗರ್ ಆಗಿ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದರು.
ಅಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಝೀರೋ ಟ್ರಾಫಿಕ್ ಮೂಲಕ ಆಂಬ್ಯುಲೆನ್ಸ್‌ನಲ್ಲಿ ಬೆಂಗಳೂರಿಗೆ ಕರೆ ತಂದು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ನಿನ್ನೆ ಸಂಜೆಯೇ ದಾಖಲು ಮಾಡಲಾಗಿತ್ತು.
ಕೇಂದ್ರ ಸಚಿವ ಸದಾನಂದಗೌಡರ ಆರೋಗ್ಯ ಸ್ಥಿರವಾಗಿದೆ. ಲೋ ಶುಗರ್ ಆಗಿದ್ದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು ಎಂದು ಆಸ್ಪತ್ರೆಯ ವೈದ್ಯರು ನಿನ್ನೆಯೇ ಹೇಳಿದ್ದರಾದರೂ ಯಾವುದಕ್ಕೂ ಇರಲಿ ಎಂದು ೨೪ ಗಂಟೆ ತೀವ್ರ ನಿಗಾದಲ್ಲಿ ಸದಾನಂದಗೌಡ ಅವರನ್ನು ಇರಿಸಲಾಗಿತ್ತು. ಈಗ ಅವರ ಆರೋಗ್ಯದಲ್ಲಿ ಪೂರ್ಣ ಚೇತರಿಕೆ ಕಂಡು ಬಂದಿದ್ದು, ನಾಳೆ ಆಸ್ಪತ್ರೆಯಿಂದ ಮನೆಗೆ ಮರಳಲಿದ್ದಾರೆ. ಮುಖ್ಯಮಂತ್ರಿಗಳ ಜತೆಗೆ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣಸವದಿ, ಗೋವಿಂದಕಾರಜೋಳ. ಡಾ. ಸಿ.ಎನ್. ಅಶ್ವತ್ಥ್‌ನಾರಾಯಣ,ಸಚಿವರಾದ ಬಸವರಾಜ ಬೊಮ್ಮಾಯಿ, ಎಸ್.ಟಿ. ಸೋಮಶೇಖರ್ ಸೇರಿದಂತೆ ಹಲವು ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಸದಾನಂದಗೌಡ ಅವರ ಆರೋಗ್ಯ ವಿಚಾರಿಸಿದರು.