ಡಿವೈಡರ್​ಗೆ ಏರಿದ ಬಸ್ಸಿಗೆ ಕಾರು ಡಿಕ್ಕಿ; ಚಾಲಕ ಸಾವು

ಬೆಂಗಳೂರು, ನ.10-ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಏರಿದ ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಯಲಹಂಕ ಬಳಿಯ ಏರ್ಪೋರ್ಟ್ ರಸ್ತೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.
ಕಾರು ಚಾಲಕ‌ ಮಂಡ್ಯ ಜಿಲ್ಲೆಯ ವಿಜಯಕುಮಾರ್ (34)ಮೃತಪಟ್ಟವರು.
ಡಿವೈಡರ್ ಏರಿ ಎದುರಿಗೆ ಬರುತ್ತಿದ್ದ ಬಸ್ಸಿಗೆ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಕಾರು ಏರ್​ಪೋರ್ಟ್‌ನತ್ತ ಹೊರಟಿದ್ದು ಮಾರ್ಗ ಮಧ್ಯದಲ್ಲಿ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಡಿವೈಡರ್ ಹತ್ತಿದ್ದು ನಿಯಂತ್ರಣ ‌ತಪ್ಪಿ‌ ಘಟನೆ ನಡೆದಿದೆ. ಕಾರಿನಲ್ಲಿದ್ದ ಓರ್ವನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.