ಡಿವೈಡರ್ ಪಕ್ಕದ ಸೂಚನಾ ಫಲಕಕ್ಕೆ ಬೈಕ್ ‌ಡಿಕ್ಕಿ ಇಬ್ಬರು ವಿದ್ಯಾರ್ಥಿಗಳು ಸಾವು

ಉಡುಪಿ, ಜು.17- ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ಕಂಬದಕೋಣೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಕಲ್ಲೂರು ತರುಣ್ ಕುಮಾರ್ ರೆಡ್ಡಿ ( 19 ) ಹಾಗೂ ಆದಿತ್ಯ ರೆಡ್ಡಿ(18) ಮೃತ ದುರ್ದೈವಿಗಳು.
ಮಣಿಪಾಲದಿಂದ ಮುರುಡೇಶ್ವರ ಕಡೆಗೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಬೈಂದೂರು ತಾಲೂಕಿನ ಕಂಬದಕೋಣೆ ಬಳಿ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಪಕ್ಕದ ಸೂಚನಾ ಫಲಕಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತ ಸಂಬಂಧ ಬೈಂದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಬೈಂದೂರು ಪಿಎಸ್ಐ ಪವನ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.