ಡಿಸಿಎಂ ರೇಸ್‌ನಲ್ಲಿ ಶಿವಾನಂದ ಪಾಟೀಲ್

ಬೆಂಗಳೂರು, ಮೇ೧೫-ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡೆದಿರುವಾಗಲೇ ಉಪಮುಖ್ಯಮಂತ್ರಿಂii ಪಟ್ಟಕ್ಕೂ ಹಲವರು ಲಾಬಿ ನಡೆಸಿದ್ದು, ಬಾಗಲಕೋಟೆಯ ಬಸವನ ಬಾಗೇವಾಡಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಮಾಜಿ ಸಚಿವ ಶಿವಾನಂದ ಪಾಟೀಲ್‌ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಪ್ರಬಲ ಕೂಗು ಕಾಂಗ್ರೆಸ್‌ನಲ್ಲಿ ಕೇಳಿ ಬಂದಿದೆ
ಹಿರಿಯ ನಾಯಕರಾದ ಶಿವಾನಂದ ಪಾಟೀಲ್‌ರವರು ೬ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದು, ಅವರಿಗೆ
ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಹಲವು ಮುಖಂಡರು ವರಿಷ್ಠರು ಒತ್ತಡ ಹೇರಿದ್ದಾರೆ.
ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿ ಉತ್ತಮವಾಗಿ ಕೆಲಸ ಮಾಡಿರುವ ಶಿವಾನಂದ ಪಾಟೀಲ್‌ರವರನ್ನು ಉಪಮುಖ್ಯಮಂತ್ರಿಯನ್ನಾಗಿಸಬೇಕು ಎಂದು ವರಿಷ್ಠರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮನವಿ ಮಾಡಿದ್ದಾರೆ.
ಬಿಜಾಪುರ-ಬಾಗಲಕೋಟೆ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಪಕ್ಷ ಸಂಘಟನೆಗಾಗಿ ದುಡಿದಿರುವ ಶಿವಾನಂದ ಪಾಟೀಲ್‌ರವರಿಗೆ ಉಪಮುಖ್ಯಮಂತ್ರಿ ಸ್ಥಾನ ದೊರಕಿಸಲು ಹಲವು ನಾಯಕರು ಪ್ರಯತ್ನ ನಡೆಸಿದ್ದಾರೆ.
ಶಿವಾನಂದ ಪಾಟೀಲ್‌ರವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಿಸಲು ನಡೆದಿರುವ ಲಾಬಿಯ ಬಗ್ಗೆ ಪ್ರತಿಕ್ರಿಯಿಸಿರುವ ಅವರ ಅವರ ಪುತ್ರಿ ಸಂಯುಕ್ತಾ ಪಾಟೀಲ್, ಆರು ಬಾರಿ ಶಾಸಕರಾಗಿರುವ ತಂದೆಗೆ ಡಿಸಿಎಂ ಸ್ಥಾನ ಸಿಗಲಿ. ನಮ್ಮ ತಂದೆ ಅವರಿಗೆ ಡಿಸಿಎಂ ಆಗುವ ಎಲ್ಲ ಅರ್ಹತೆ ಇದೆ. ತಂದೆ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಹಿರಿಯ ರಾಜಕಾರಣಿಗಳಾಗಿದ್ದಾರೆ ಎಂದರು.
ಸದ್ಯ ಕಾಂಗ್ರೆಸ್ ಸರ್ಕಾರ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಅದು ಸಾಧ್ಯ. ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿದರೆ ನಿಭಾಯಿಸುವ ಸಾಮರ್ಥ್ಯ ಅವರಲ್ಲಿದೆ ಎಂದು ಅವರು ಹೇಳಿ ಕ್ಷೇತ್ರದ ಜನತೆ ಸಹ ಶಿವಾನಂದ ಪಾಟೀಲರು ಡಿಸಿಎಂ ಆಗಬೇಕು ಎಂಬ ಬಯಕೆ ಹೊಂದಿದ್ದಾರೆ ಎಂದರು.