ಡಿಸಿಎಂ ಸಿಗದಿದ್ದಕ್ಕೆ ಬೇಸರವಿಲ್ಲ

ಬೆಂಗಳೂರು,ಮೇ೨೦:ಉಪಮುಖ್ಯಮಂತ್ರಿ ಸ್ಥಾನ ಸಿಗದೆ ಇದ್ದದ್ದಕ್ಕೆ ನನಗೆ ಬೇಸರ ಇಲ್ಲ, ನಾನು ಸಂತೋಷದಿಂದಲೇ ಸಚಿವನಾಗಿ ಅಧಿಕಾರ ಸ್ವೀಕರಿಸಿದ್ದೇನೆ ಎಂದು ನೂತನ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಜನತೆ ಇಟ್ಟುಕೊಂಡಿರುವ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕಿದೆ. ಅದು ನಮ್ಮ ಮುಂದಿರುವ ಪ್ರಾಮುಖ್ಯ, ಬೇರೆ ವಿಚಾರಗಳ ಬಗ್ಗೆ ಚರ್ಚೆ ಬೇಡ, ನನಗೆ ಯಾವುದೇ ಬೇಸರವಿಲ್ಲ, ಸಣ್ಣ-ಪುಟ್ಟ ವ್ಯತ್ಯಾಸಗಳನ್ನು ಬಿಟ್ಟು ಕೆಲಸ ಮಾಡಬೇಕಾಗುತ್ತದೆ ಎಂದರು. ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿ ಯೋಜನೆಯನ್ನು ಇಂದು ಜಾರಿ ಮಾಡುತ್ತೇವೆ. ಅನುಷ್ಠಾನ ಸಂದರ್ಭದಲ್ಲಿ ಕೆಲ ನಿಯವನ್ನು ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು.ಸಚಿವ ಸಂಪುಟದಲ್ಲಿ ಅವಕಾಶ ಮಾಡಿಕೊಟ್ಟ ಹೈಕಮಾಂಡ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳಿದರು.