ಡಿಸಿಸಿ ಬ್ಯಾಂಕ್ ಮುಂದೆ ಕೆಪಿಆರ್‍ಎಸ್ ಪ್ರತಿಭಟನೆ

ಕಲಬುರಗಿ,ಏ.10-ಹೈನುಗಾರಿಕೆ ಸಾಲ ಮತ್ತು ಬೆಳೆಸಾಲ ಮಂಜೂರಾದ ರೈತರಿಗೆ ಸರಳವಾಗಿ ಸಾಲ ನೀಡದೆ ಕುಂಟುನೆಪ ಹೇಳಿ ಸತಾಯಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‍ಎಸ್)ದ ನೇತೃತ್ವದಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ಮುಂದೆ ಪ್ರತಿಭಟನೆ ನಡೆಸಲಾಯಿತು.
ಡಿಸಿಸಿ ಬ್ಯಾಂಕ್‍ನಿಂದ ರೈತರಿಗೆ ಹೊಸದಾಗಿ ಸಾಲ ನೀಡಬೇಕು, ಜಿಲ್ಲೆಯಲ್ಲಿ ಅತಿವೃಷ್ಟಿ, ಪ್ರಕೃತಿ ವಿಕೋಪ, ನೆಟೆರೋಗದಿಂದ ತೊಗರಿ ಬೆಳೆ ಹಾನಿಯಾದ ರೈತರಿಗೆ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಲಾಯಿತು. ಕೆಪಿಆರ್‍ಎಸ್ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.