ಡಿಸೆಂಬರನಲ್ಲಿ ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆ ಪೂರ್ಣ : ಶ್ರೀಮಂತ ಪಾಟೀಲ

ಅಥಣಿ : ಜು.28:ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಯು ಡಿಸೆಂಬರ ಅಂತ್ಯದೊಳಗಾಗಿ ಪೂರ್ಣ ಗೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಯೋಜನೆಯ ಪೂರ್ಣಗೊಳ್ಳಲು ಬೇಕಾಗುವ ಅನುದಾನವನ್ನು ಬಿಡುಗಡೆಗೊಳಿಸಲು ಒಪ್ಪಿಗೆ ಸೂಚಿಸಿದ್ದಾರೆ ಇದರ ಬಗ್ಗೆ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಅವರು ಹೇಳಿದರು

ಅವರು ಅಥಣಿಯ ನೀರಾವರಿ ಇಲಾಖೆಯ ಕಛೇರಿಯಲ್ಲಿ ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಯ ಪ್ರಗತಿ ಕುರಿತು ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಸಭೆ ನಡೆಸಿದರು ನಂತರ ಮಾತನಾಡಿದ ಅವರು ಕಳೆದೆರಡು ವರ್ಷ ಕರೋನಾ ಮಹಾಮಾರಿ ಸಂದರ್ಭದಲ್ಲಿ ಈ ಯೋಜನೆಗೆ ಹಣ ಬಿಡುಗಡೆ ಆಗುವಲ್ಲಿ ವಿಳಂಬವಾಗಿತ್ತು ಹೀಗಾಗಿ ಈ ಯೋಜನೆಗೆ ಸ್ವಲ್ಪ ಹಿನ್ನಡೆಯಾಗಿದೆ ಆದರೆ ಇತ್ತೀಚಿನ ದಿನಗಳಲ್ಲಿ ಈ ಯೋಜನೆ ವಿಳಂಬವಾಗುತ್ತಿರುವ ಕುರಿತು ಅನೇಕ ಬಾರಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ, ಈ ಯೋಜನೆ ಆದಷ್ಟು ಬೇಗನೆ ಪೂರ್ಣಗೊಳಿಸಲು ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕೂಡ ಶ್ರಮಿಸುತ್ತಿದ್ದಾರೆ ಎಂದರು.

ಈ ವೇಳೆ ನೀರಾವರಿ ಇಲಾಖೆಯ ಅಧಿಕ್ಷಕ ಅಭಿಯಂತರ ಬಿ.ಆರ್.ರಾಠೋಡ್, ಕಾರ್ಯನಿರ್ವಾಹಕ ಅಭಿಯಂತರ ಎಸ್.ಜಿ. ಶ್ರೀನಾಥ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಕೆ. ರವಿ, ಪ್ರವೀಣ ಹುಣಶಿಕಟ್ಟಿ, ಪ್ರಶಾಂತ ಪೆÇೀದ್ದಾರ, ಗುತ್ತಿಗೆದಾರ ಶೇಖರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.