ಡಿಸೆಂಬರ್‍ನಲ್ಲಿ ನಡೆಯುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಬೀದರ ಜಿಲ್ಲೆಯ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿ:ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ ಜು.23: ಬೀದರ ಜಿಲ್ಲೆಯಲ್ಲಿ ಡಿಸೆಂಬರ್.5 ರಿಂದ 22 ರವರೆಗೆ ಅಗ್ನಿ ಪಥನ್ ಅಗ್ನಿ ವೀರರಿಗಾಗಿ ಸೇನಾ ನೇಮಕಾತಿ ರ್ಯಾಲಿ ಹಮ್ಮಿಕೊಂಡಿದ್ದು, ಈ ರ್ಯಾಲಿಯಲ್ಲಿ ಬೀದರ ಜಿಲ್ಲೆಯ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೀದರ ಜಿಲ್ಲೆಯಲ್ಲಿ ಸೇನಾ ನೇಮಕಾತಿ ರ್ಯಾಲಿ ಆಯೋಜಿಸುವ ಕುರಿತು ಕರೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡಿಸೆಂಬರ್.5 ರಿಂದ ಆರಂಭವಾಗುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಮುಂಚಿತವಾಗಿ ಆಗಸ್ಟ್.1 ರಿಂದ 30 ರವರೆಗೆ ಅನ್‍ಲೈನ್ ರಜಿಸ್ಟ್ರೇಷನ್ ಇದ್ದು, ಈ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಕಲ್ಯಾಣ ಕರ್ನಾಟಕ ಹಿಂದುಳಿದ ಭಾಗವಾಗಿದ್ದು ಈ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಇದೊಂದು ಸದಾವಕಾಶವಾಗಿದೆ. ವಿದ್ಯಾರ್ಥಿಗಳು ತಮ್ಮ ಹೆಸರನ್ನು ತಿತಿತಿ.ರಿoiಟಿiಟಿಜiಚಿಟಿಚಿಡಿmಥಿ.ಟಿiಛಿ.iಟಿ ದಲ್ಲಿ ನೊಂದಾಯಿಸಿ ಈ ರ್ಯಾಲಿಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದರು.

ಈ ರ್ಯಾಲಿಗೆ ಎಲ್ಲ ರೀತಿಯ ಸಹಾಯ ಸಹಕಾರವನ್ನು ಜಿಲ್ಲಾಡಳಿತದಿಂದ ಸೇನೆಯ ಅಧಿಕಾರಿಗಳಿಗೆ ನೀಡಲಾಗುವುದು ಮತ್ತು ಇದಕ್ಕೆ ಸಂಬಂಧಿಸಿದ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಭೆಯಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ನೆಹರು ಸ್ಟೇಡಿಯಂನಲ್ಲಿ ಡಿಸೆಂಬರ್ ತಿಂಗಳಲ್ಲಿ ಸೇನಾ ನೇಮಕಾತಿ ರ್ಯಾಲಿ ಇರುವುದರಿಂದ ಇತರೆ ಯಾವುದೇ ಕ್ರೀಡಾ ಚಟುವಟಿಕೆಗಳನ್ನು ಅಲ್ಲಿ ಹಮ್ಮಿಕೊಳ್ಳದಂತೆ ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕ್ರೀಡಾಂಗಣ ಮತ್ತು ಅದರ ಅಕ್ಕ ಪಕ್ಕದಲ್ಲಿಯೂ ಈ ರ್ಯಾಲಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದು ಹೇಳಿದರು.

ಸೇನಾ ನೇಮಕಾತಿ ಕಚೇರಿ ಬೆಳಗಾಂವ ನಿರ್ದೇಶಕರಾದ ಕರ್ನಲ್ ನಿಶಾಂತ ಶೆಟ್ಟಿ ಅವರು ಮಾತನಾಡಿ ಈ ವರ್ಷ ಬೀದರನಲ್ಲಿ ಅಗ್ನಿ ಪಥ ಯೋಜನೆಯ ಅಗ್ನಿ ವೀರರ ಸೇನಾ ನೇಮಕಾತಿ ರ್ಯಾಲಿಯನ್ನು ಡಿಸೆಂಬರದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಈ ರ್ಯಾಲಿಯಲ್ಲಿ ಬೀದರ, ಗುಲಬರ್ಗಾ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯ 65 ರಿಂದ 85 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಇದರಲ್ಲಿ ಬೀದರ ಜಿಲ್ಲೆಯ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಬೇಕು ಈ ಹಿಂದೆ ನಡೆದ ನೇಮಕಾತಿ ರ್ಯಾಲಿಗಳಲ್ಲಿ ಬೀದರ ಜಿಲ್ಲೆಯ ವಿದ್ಯಾರ್ಥಿಗಳು ಕಡಿಮೆ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಇನ್ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ನಮ್ಮ ಈ ನೇಮಕಾತಿ ರ್ಯಾಲಿಗೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಸಹಾಯ ಮತ್ತು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾಂ ಎಂ., ಬೀದರ ವಾಯು ಪಡೆಯ ಅಧಿಕಾರಿ ಡಿ.ಕೆ.ಮಿಶ್ರಾ, ಅಪರ ಜಿಲ್ಲಾಧಿಕಾರಿ ಶಿವುಕುಮಾರ ಶೀಲವಂತ, ಸಹಾಯಕ ಆಯುಕ್ತರಾದ ಮಹ್ಮದ ನಯೀಮ ಮೋಮಿನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ, ಬೀದರ ತಹಸೀಲ್ದಾರ ಅಣ್ಣಾರಾವ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.