ಡಿಸೆಂಬರ್ ಗೆ ವಿಧಾನಸಭಾ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧತೆ: ಎಚ್ ಡಿಕೆ ಭವಿಷ್ಯ

ಬೆಂಗಳೂರು, ಜು.22- ಸಚಿವ ಸಂಪುಟ ಸಭೆಯಲ್ಲಿ‌ ಇಂದು ಕೈಗೊಂಡಿರುವ ನಿರ್ಧಾರಗಳನ್ನು ಗಮನಿಸಿದರೆ ಬಿಜೆಪಿ ವಿಧಾನಸಭಾ ಚುನಾವಣೆಗೆ ಹೋಗುವ ಹಾದಿಯಲ್ಲಿದೆ ಎಂದು ಮಾಜಿ‌ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಡಿಸೆಂಬರ್ ವೇಳೆಗೆ ಚುನಾವಣೆಗೆ ಹೋಗಲು ಬಿಜೆಪಿ ಸಿದ್ಧತೆ ನಡೆಸಿದೆ. ಇದಕ್ಕೆ ಪೂರಕವಾಗಿ ಸಂಪುಟ ಸಭೆ ನಡೆಸಿದೆ ಎಂದು ಅವರು ಭವಿಷ್ಯ ನುಡಿದರು.
ಪಕ್ಷದ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಸಭೆಯ ಮೂಲಕ ವಿಧಾನಸಭಾ ಚುನಾವಣಾ ಸಂದೇಶವನ್ನು ನೀಡಿದ್ದು, ಪಕ್ಚ ಚುನಾವಣೆ ಎದುರಿಸಲು ಸಿದ್ಧವಿದೆ ಎಂದರು.
ಹಾಸನದಲ್ಲಿ ಒಂದು ಬಡಾವಣೆ ನಿರ್ಮಾಣಕ್ಕೆ ಸುಮಾರು ಒಂದೂವರೆ ಸಾವಿರ ಕೋಟಿ ರೂ. ಹಣ ಮೀಸಲಿಡಕು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದೆ. ಮುಂದೊಂದು ದಿನ ಇದೇ ಒಂದು ದೊಡ್ಡ ಹಗರಣ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ತಿಳಿಸಿದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರನಿಗೆ
ಕ್ಷೇತ್ರ ಬಿಟ್ಟು ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಬಿಜೆಪಿ ಪಕ್ಷದಲ್ಲಿ ಬಿಎಸ್ ವೈ ಪುತ್ರರಿಗೆ ಚುನಾವಣೆಗೆ ನಿಲ್ಲಲು ಒತ್ತಡ ಹಾಕಿದ್ದಾರೆ. ಕಾರ್ಯಕರ್ತರು. ಅವರಿಗೆ ಚುನಾವಣೆ ಎದುರಿಸುವ ಶಕ್ತಿ ಇದೆ. ಅವರ ಪಕ್ಷದ ಕಾರ್ಯಕರ್ತರಿಗೆ ಸಮಸ್ಯೆ ಆಗಬಾರದು ಅಂತ ಹೀಗೆ ಹೇಳಿರಬೇಕು ಎಂದು ಅಭಿಪ್ರಾಯಪಟ್ಟರು.