ಡಿ.ಕೆ.ಶಿವಕುಮಾರ್ ಶ್ರೀಕ್ಷೇತ್ರ ಧರ್ಮಸ್ಥಳ ಭೇಟಿ

ಉಜಿರೆ , ಎ.೫- ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾನುವಾರ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ರಾಜ್ಯದೆಲ್ಲೆಡೆ ಹಮ್ಮಿಕೊಂಡ ಸೇವಾ ಕಾರ್ಯಗಳು ಹಾಗೂ
ವಿಶೇಷವಾಗಿ ಕೆರೆಗಳ ಪುನಶ್ಚೇತನ ಕಾರ್ಯದ ಬಗ್ಯೆ ಹೆಗ್ಗಡೆಯವರು ಅವರಿಗೆ ಮಾಹಿತಿ ನೀಡಿದರು.