
ಮೈಸೂರು: ಮೇ.16:- ಅಗ್ರಹಾರ ವೃತ್ತದಲ್ಲಿ ಸಾರ್ವಜನಿಕರಿಗೆ ನಂದಿನಿ ಸಿಹಿ ತಿನಿಸು ವಿತರಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು.
ನಗರ ಕಾಂಗ್ರೆಸ್ ಸೇವಾದಳದಿಂದ ಸೋಮವಾರ ಡಿ.ಕೆ.ಶಿವಕುಮಾರ್ ಅವರ 62ನೇ ಹುಟ್ಟುಹಬ್ಬ ಆಚರಿಸಲಾಯಿತು. ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ಪರವಾಗಿ ಘೋಷಣೆ ಕೂಗಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿ, ಸಾರ್ವಜನಿಕರಿಗೆ ಸಿಹಿ ವಿತರಿಸುವ ಮೂಲಕ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದೇವೆ. ಚಾಮುಂಡೇಶ್ವರಿ ಆರೋಗ್ಯ ಭಾಗ್ಯ ನೀಡಿ ಒಳ್ಳೇಯದಾಗಲೆಂದು ಹಾರೈಸಿದರು.
ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ದರಾಜು ಮಾತನಾಡಿ, ಬಿಜೆಪಿ ಸರ್ಕಾರದ ಶೇ.40 ಕಮಿಷನ್ ಆರೋಪ ಮತ್ತು ದುರಾಡಳಿತದಿಂದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದ ಗೆಲುವು ದೊರೆತಿದೆ ಎಂದರು.
ಕಾಂಗ್ರೆಸ್ ಬಡವರಿಗೆ ಸೌಲಭ್ಯ ಕೊಡಲು ಬದ್ಧವಾಗಿದೆ. ಪ್ರಣಾಳಿಕೆಯಲ್ಲಿ ನೀಡಲಿರುವ ಭರವಸೆಗಳನ್ನು ಈಡೇರಿಸಲಿದ್ದೇವೆ. ಕಾಂಗ್ರೆಸ್ ಪಕ್ಷದಿಂದ ಜನ ಸಾಮಾನ್ಯರಿಗೆ ಒಳ್ಳೇಯದಾಗಲಿದೆ. ಡಿ.ಕೆ.ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು.
ಮಾಜಿ ಮೇಯರ್‍ಗಳಾದ ಟಿ.ಬಿ.ಚಿಕ್ಕಣ್ಣ, ಪುಷ್ಪಾಲತಾ ಚಿಕ್ಕಣ್ಣ, ಮೋದಾಮಣಿ, ಬಿ.ಕೆ.ಪ್ರಕಾಶ್, ಮಹದೇವಪ್ಪ, ಮುಖಂಡರಾದ ಭಾಸ್ಕರ್ ಎಲ್.ಗೌಡ, ಎಂ.ಕೆ.ಅಶೋಕ್, ಡೈರಿ ವೆಂಕಟೇಶ್, ಧನ್‍ಪಾಲ್ ಕುರುಬಾರಹಳ್ಳಿ ಮುಂತಾದವರಿದ್ದರು.