ಡಿ.ದೇವರಾಜ ಅರಸ್ ಅವರ 108ನೇ ಜನ್ಮದಿನಾಚರಣೆ

ಧಾರವಾಡ,ಆ21: ಅರಸು ಅವರು ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿನಿಲಯಗಳ ಪರಿಕಲ್ಪನೆಯನ್ನು ರಾಜ್ಯಕ್ಕೆ ನೀಡಿದ್ದಾರೆ.ಇಂತಹ ಆದರ್ಶ ವ್ಯಕ್ತಿಗಳು ನಮಗೆ ಸ್ಫೂರ್ತಿಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.ಅವರು ಹೇಳಿದರು.
ನಗರದ ಆಲೂರು ವೆಂಕಟರಾವ್ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರ 108ನೇ ಜನ್ಮದಿನಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಂಸ್ಕೃತಿಕ ಚಳುವಳಿಯ ನಾಯಕರಾಗಿ ಅವರು ಅನುಸರಿಸಿಕೊಂಡು ಬಂದ ಬದ್ಧತೆ ಮತ್ತು ತತ್ವಸಿದ್ದಂತಗಳು ಅವರನ್ನು ಮೇರು ಮಟ್ಟಕ್ಕೆ ಏರಿಸಿದೆ. ನಾಡು ಕಂಡ ಮತ್ಸದಿ ನಾಯಕ. ಅರಸು ಅವರು ನಾಡಿನ ಚರಿತ್ರೆಯಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ ಎಂದು ಅವರು ಹೇಳಿದರು.
ದೇವರಾಜ ಅರಸು ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ 1973ರಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿ, ಕನ್ನಡ ಭಾಷೆಯನ್ನು ಆಡಳಿತ ಭಾಷೆಯನ್ನು ಘೋಷಿಸಲಾಯಿತು. ಅಚ್ಚಳಿಯದ ಸಾಮಾಜಿಕ ಕಾರ್ಯಗಳ ಮೂಲಕ ಕನ್ನಡಿಗರ ಮನಸ್ಸಿನಲ್ಲಿ ಅವರು ಸದಾಕಾಲ ಉಳಿದಿದ್ದಾರೆ. ನಾಡಿನ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದರು. ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಅನೇಕ ಯೋಜನೆಗಳ ಕೊಡುಗೆ ನೀಡಿದ್ದಾರೆ ಎಂದು ಅವರು ಹೇಳಿದರು.
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ವೆಂಕನಗೌಡ ಪಾಟೀಲ ಅವರು ವಿಶೇಷ ಉಪನ್ಯಾಸ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸರೋಜ ಹಳಕಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯಸ್ಥಪಕ ಆರ್.ಎನ್.
ದಿಡ್ಡಿಬಾಗಿಲು ಮತ್ತು ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ರವಿ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ, ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.