ಡಿ.ಸಿ ಕಚೇರಿಯಲ್ಲಿ ಕನಕದಾಸ ಜಯಂತಿ ಸರಳ ಆಚರಣೆ

ಬೀದರ: ನ.23:ಕೋವಿಡ್-19 ಹಿನ್ನೆಲೆಯಲ್ಲಿ ಕನಕದಾಸ ಜಯಂತಿಯನ್ನು ಜಿಲ್ಲಾಡಳಿತದಿಂದ ನಿನ್ನೆ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್., ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮತ್ತು ಆಹಾರ ಇಲಾಖೆಯ ಉಪ ನಿರ್ದೇಶಕರಾದ ಬಿ.ಬಾಬುರೆಡ್ಡಿ ಅವರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಿದರು.

ಕನಕದಾಸ ಅವರು ಸಂತ ಶ್ರೇಷ್ಠ ಭಕ್ತ ಎಂದು ನಮಗೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಅವರು ತಿಳಿಸಿದ ಮಾನವೀಯ ಮೌಲ್ಯಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಸಮುದಾಯ ಹಿರಿಯರು ಹಾಗೂ ಇನ್ನೀತರರು ಇದ್ದರು.