ಡಿ.ಸಿ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲಬುರಗಿ,ಜೂ.5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಅರಣ್ಯ ಇಲಾಖೆಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಸಸಿ ನೆಟ್ಟು ನೀರೆರೆಯುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಭೂಮಿಯ ಮೇಲೆ ಪರಿಸರದಿಂದ ನಮಗೆ ಉಚಿತವಾಗಿ ಆಮ್ಲಜನಕ ದೊರೆಯುತ್ತದೆ. ಇಡೀ ಜೀವ ಸಂಕುಲವನ್ನು ಪರಿಸರ ಪೆÇೀಷಿಸುತ್ತಿದೆ. ಹೀಗಾಗಿ ಪರಿಸರ ಕಾಳಜಿ ದಿನಾಚರಣೆಗೆ ಸೀಮಿತವಾಗದೇ, ಪ್ರತಿಯೊಬ್ಬರು ಪ್ರತಿನಿತ್ಯ ಪರಿಸರ ಸಂರಕ್ಷಣೆಯ ಕಾಳಜಿ ವಹಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಬೇವು, ಚಳ್ಳೆ, ಸಿಸು, ಗುಲ್ ಮೋಹರ್ ಸಸಿಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ.ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀμï ಶಶಿ, ಕಲಬುರಗಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ.ವಾನತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಬುರಾವ ಪಾಟೀಲ್ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರು.