ಡಿ.ಸಿ.ಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್, ಮತದಾನಕ್ಕೆ‌ ಸಕಲ‌ ಸಿದ್ಧತೆ ಮಾಡಿಕೊಳ್ಳಲು ಕೃಷ್ಣ ಭಾಜಪೇಯಿ ಸೂಚನೆ

ಕಲಬುರಗಿ:ಮೇ.30: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯ ಮತದಾನ ಇದೇ ಜೂನ್ 3 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಗುರುವಾರ ಕ್ಷೇತ್ರದ‌ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ಕ್ಣೇತ್ರದ ವ್ಯಾಪ್ತಿಯ ಜಿಲ್ಲಾಧಿಕಾರಿಗಳೊಂದಿಗೆ ವಿ.ಸಿ. ಮೂಲಕ‌ ಸಭೆ ನಡೆಸಿ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ‌ ನೀಡಿದರು.

ಕ್ಷೇತ್ರದಾದ್ಯಂತ ಎಲ್ಲಿಯೂ ಅಹಿತಕರ‌ ಘಟನೆ ನಡೆಯದಂತೆ ಮತ್ತು ಶಾಂತಿಯುತವಾಗಿ ಜರುಗಲು ಎಲ್ಲಾ ರೀತಿಯ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ ಅವರು, ಜಿಲ್ಲೆಯಲ್ಲಿ ಕೈಗೊಂಡ ಸಿದ್ದತೆ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳಿಂದ ಮಾಹಿತಿ ಪಡೆದರು.

ಆರ್.ಸಿ. ಜೊತೆಗೆ ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ಇದ್ದರು.