ಡಿ.೭ ರಿಂದ ೧೪ ವರೆಗೆ ಭಗವದ್ಗೀತಾ ಅಭಿಯಾನ ಕಾರ್ಯಕ್ರಮ- ಆನಂದತೀರ್ಥ

ರಾಯಚೂರು, ಡಿ.೬- ಶ್ರೀ ಸರ್ವ ಜ್ಞೆಂದ್ರ ಸರಸ್ವತಿ ಪ್ರತಿಷ್ಠಾನ ಸಿರಸಿ ವತಿಯಿಂದ ಡಿ.೧೨ ರಂದು ಶ್ರೀ ಭಗವದ್ಗೀತಾ ಅಭಿಯಾನ ಸಮರ್ಪಣಾ ಕಾರ್ಯಕ್ರಮವನ್ನು ನಗರದ ಶೃಂಗೇರಿ ಶಂಕರಮಠದಲ್ಲಿ ಆಯೋಜಿಸಲಾಗಿದೆ ಎಂದು ಭಗವದ್ಗೀತಾ ಅಭಿಯಾನ ಸಮಿತಿ ಅಧ್ಯಕ್ಷ ಡಾ. ಆನಂದತೀರ್ಥ ಫಡ್ನಿಸ್ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಡಿ.೭ ರಿಂದ ೧೪ ರವರಿಗೆ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶಿರಸಿ ಸ್ವರ್ಣವಲ್ಲೀ ಮಠ ದ ಸೋಂದಾ, ಸಾವಿರ ದೇವರ ಸಂಸ್ಥಾನ ಕಿಲ್ಲೆ ಬೃಹನ್ಮಠ ದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿಗಳು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರ ಶಾಸಕ ಡಾ. ಶಿವರಾಜ್ ಪಾಟೀಲ್,ಮಾಜಿ ವಿಧಾನಪರಿಷತ್ ಸದಸ್ಯ ಎನ್. ಶಂಕ್ರಪ್ಪ ನಗರಸಭೆ ಅಧ್ಯಕ್ಷ ಬಿ ವಿನಯ್ ಕುಮಾರ್ ಭಾಗವಹಿಸಲಿದ್ದಾರೆ.ಹಾಗೂ ಭಗವದ್ಗೀತಾ ಅಭಿಯಾನ ಸಮಿತಿಯ ಉಪಾಧ್ಯಕ್ಷ ನಾರಾಯಣ ಭಟ್ಟ ಬಳ್ಳಿ, ನಗರಸಭೆ ಸದಸ್ಯ ಶಶಿರಾಜ್, ಮಾಜಿ ನಗರಸಭೆ ಸದಸ್ಯ ಹರೀಶ್ ನಾಟಕ ಗೌಡ, ನಗರ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಿ ಗೋವಿಂದ, ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ವಸಂತರಾಜ್ ಗುರುರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.