ಡಿ 1ರಿಂದ ರಾಜೀವ್ ಗಾಂಧಿ ವಿವಿ ಆರಂಭ: ಸಚಿವ ಸುಧಾಕರ್

ಚಿತ್ರದುರ್ಗ, ನ, 13- ಡಿಸೆಂಬರ್ ಒಂದರಿಂದ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಆರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಣಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಚಿತ್ರದುರ್ಗ ದಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀವ್ ಆರೋಗ್ಯ ವಿಜ್ಞಾನ ಗಳ ವಿವಿ ವ್ಯಾಪ್ತಿಯ ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ನರ್ಸಿಂಗ್ ಕಾಲೇಜುಗಳು ಆರಂಭವಾಗಲಿದೆ ಎಂದು ಹೇಳಿದರು.
ಪದವಿ ಕಾಲೇಜುಗಳು ನ.17ರಿಂದ ಆರಂಭವಾಗಲಿದ್ದು, ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳು ಹೊರ ರಾಜ್ಯದಲ್ಲೂ ಇದ್ದಾರೆ. ಆ ವಿದ್ಯಾರ್ಥಿಗಳು ಕಾಲೇಜಿಗೆ‌ ಬರಲು ಕಾಲಾವಕಾಶವಿದೆ. ಡಿ 1ರಿಂದ ತರಗತಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದರು.
ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವ ಸುಧಾಕರ್, ಈ ವಿಚಾರ ಚರ್ಚೆ ಯ ಹಂತದಲ್ಲಿದೆ. ಶಿಕ್ಷಣಕ್ಕಿಂತ ಮಕ್ಕಳ ಆರೋಗ್ಯ ಮುಖ್ಯ. ಉನ್ನತ ಶಿಕ್ಷಣ ಆರಂಭಿಸಿ ಪರಿಶೀಲನೆ ನಡೆಸಲಾಗುತ್ತದೆ. ಇದರ ಆಧಾರದ ಮೇಲೆ ಶಾಲೆಗಳನ್ನು ಆರಂಭಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಹೇಳಿದರು.
ಕೋವಿಡ್‌ ಲಸಿಕೆ ಪ್ರಾಯೋಗಿಕ ಹಂತದಲ್ಲಿದೆ. ಪ್ರಯೋಗ ಯಶಸ್ವಿಯಾಗಲಿದೆ ಎಂಬ ವಿಶ್ವಾಸ‌‌‌‌ ವ್ಯಕ್ತಪಡಿಸಿದ ಅವರು,
ಜನವರಿ ನಂತರ ಬಳಕೆಗೆ ಸಿಗುವ ಸಾಧ್ಯತೆ ಇದೆ. ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.