ಡಿ.10ಕ್ಕೆ ಬೆಂಗಳೂರಿನಲ್ಲಿ ಆರ್ಯ ಈಡಿಗ ಸಮುದಾಯದ ಜಾಗೃತ ಸಮಾವೇಶ

ಸಂಜೆವಾಣಿ ವಾರ್ತೆ

ದಾವಣಗೆರೆ.ಡಿ.೭: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ 75ನೇ ಅಮೃತ ಮಹೋತ್ಸವ ಹಾಗೂ ಈಡಿಗ, ಬಿಲ್ಲವ, ಪೂಜಾರಿ, ದೀವರ, ನಾಮಧಾರಿ ಸೇರಿದ 26 ಪಂಗಡಗಳ ಬೃಹತ್ ಜಾಗೃತ ಸಮಾವೇಶವನ್ನು ಡಿಸೆಂಬರ್ 10ರ ಭಾನುವಾರ ಬೆಂಗಳೂರು ಅರಮನೆ ಮೈದಾನದಲ್ಲಿ ಬೆಳಿಗ್ಗೆ 11ಕ್ಕೆ ಆಯೋಜಿಸಲಾಗಿದೆ ಎಂದು ದಾವಣಗೆರೆ ಜಿಲ್ಲಾ ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎ.ನಾಗರಾಜ್ ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮುದಾಯದ ಮಠಾಧೀಶರಾದ ಸೋಲೂರಿನ ವಿಖ್ಯಾತನಂದ ಸ್ವಾಮಿಜಿ, ನಿಟ್ಟೂರಿನ ರೇಣುಕಾನಂದ ಸ್ವಾಮೀಜಿ ಸೇರಿದಂತೆ ಇತರೆ ಮಠಾಧೀಶರು ಆಗಮಿಸಲಿದ್ದಾರೆ. ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ.ಎಂ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮತ್ತು ಸಮಾಜದ ಎಲ್ಲಾ ರಾಜಕೀಯ ಪಕ್ಷದ ಚುನಾಯಿತ ಪ್ರತಿನಿಧಿಗಳು ಹಾಗೂ ಮುಖಂಡರುಗಳು, ರಾಜ್ಯ ಆರ್ಯ ಈಡಿಗ ನೌಕರರ ಸಂಘ ಮತ್ತು ಕರ್ನಾಟಕದ ಎಲ್ಲಾ ಜಿಲ್ಲಾ ಸಂಘ, ತಾಲ್ಲೂಕು ಸಂಘಗಳ ಪದಾಧಿಕಾರಿಗಳು, ಸಮಾಜದ ಚಿತ್ರರಂಗದ ಗಣ್ಯರು ಮತ್ತು ನಟ ನಟಿಯರ ಸಹಭಾಗಿತ್ವದಲ್ಲಿ ಈ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.ದಾವಣಗೆರೆ ಜಿಲ್ಲಾ ಅರಗಯ ಈಡಿಗರು ಸಂಘ, ದಾವಣಗೆರೆ ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘ, ಚನ್ನಗಿರಿ ತಾಲ್ಲೂಕು ಆರ್ಯ ಈಡಿಗರ ಸಂಘ, ಹರಿಹರ ತಾಲ್ಲೂಕು ಆರ್ಯ ಈಡಿಗರ ಸಂಘ, ಹೊನ್ನಾಳಿ-ನ್ಯಾಮತಿ ತಾಲ್ಲೂಕು ಆರ್ಯ ಈಡಿಗರ ಸಂಘ, ಜಗಳೂರು ತಾಲ್ಲೂಕು ಆರ್ಯ ಈಡಿಗರ ಸಂಘ ಹಾಗೂ ಶ್ರೀ ರೇಣುಕಾಂಬ ಕ್ರೆಡಿಟ್ ಕೋ. ಆಪ್ ಸೊಸೈಟಿ, ದಾವಣಗೆರೆ ಇವರೊಟ್ಟಿಗೆ ದಾವಣಗೆರೆ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಸಮುದಾಯದ ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಹೆಚ್.ಶಂಕರ್, ರವೀಂದ್ರ ಬಾಬು, ಶಾಂತಾರಾಮ್, ಈ.ದೇವೇಂದ್ರಪ್ಪ, ಕೃಷ್ಣಮೂರ್ತಿ, ಎಸ್.ಭರಮಪ್ಪ, ಗಂಗಾಧರ್, ತಿಪ್ಪೇಸ್ವಾಮಿ, ಪ್ರಕಾಶ್, ಲೋಕಣ್ಣ,  ಗೋವಿಂದರಾಜು, ರಾಮದಾಸ್, ಬಕ್ಕಣ್ಣ, ಜಯಪ್ರಕಾಶ್, ರಘು ಇತರರು ಇದ್ದರು.