ಡಿ. 12ರಂದು ಜಿಲ್ಲಾ ಮಟ್ಟದ ಜಾಗೃತ ಸಮಾವೇಶ

ಸಂಜೆವಾಣಿ ವಾರ್ತೆ,
ವಿಜಯಪುರ:ಡಿ.11:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ನಿಮಿತ್ತ ಸಂವಿಧಾನ ರಕ್ಷಣೆಗಾಗಿ ಪ್ರಜಾಪ್ರಭುತ್ವ ಉಳಿವಿಗಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ ಡಿ. 12ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡರಯಲಿದೆ ಎಂದು ಕರ್ನಾಟಕ ದಲಿತ ಸಂಘóರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕÀ ಸಂಜು ಕಂಬಾಗಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ, ವರ್ಗಗಳಿಗೆ ವಿಶೇಷ ಘಟಕ Sಅ,SP ಯೋಜನೆಯನ್ನು ರಾಷ್ಟ್ರಮಟ್ಟದಲ್ಲಿ ಕಾಯ್ದೆ ರೂಪಿಸಿ ಕೇಂದ್ರ ಬಜೆಟ್‍ನಲ್ಲಿ ಹಣ ಮೀಸಲಿಟ್ಟು ಅನುಸ್ಥಾನಗೊಳಿಸಬೇಕು. ಜಾತಿ ಜನಗಣತಿಯನ್ನು ನಡೆಸಲು ಕೇಂದ್ರ ಸರ್ಕಾರ ಸಂವಿಧಾನಿಕ ಕ್ರಮ ಕೈಗೊಳ್ಳಬೇಕು. ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಕಡ್ಡಾಯವಾಗಿ ರಾಜಕೀಯ ಮೀಸಲಾತಿ ದೊರಕಿಸಿಕೊಡಬೇಕು. ಭಾರತದ ಬಹುಸಂಖ್ಯಾತರಿಗೆ ಅಕ್ಷರದ ಅರಿವು ಮೂಡಿಸಿದ ಮಹಾತ್ಮ ಜೋತಿಬಾ ಫುಲೆ ಮತ್ತು ಮಾತೆ ಸಾವಿತ್ರಿಬಾಯಿ ಪುಲೆಯವರ ನೆನಪಿನಲ್ಲಿ ‘ರಾಷ್ಟ್ರೀಯ ಶಿಕ್ಷಣ ದಿನ’ ಆಚರಿಸಲು ಕ್ರಮಕೈಗೊಳ್ಳಬೇಕು. ಕೇಂದ್ರದ ಹೊಸ ಆರ್ಥಿಕ ನೀತಿಗಳಿಂದ ವಂಚನೆಗೊಳಗಾಗುತ್ತಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಭೂ ಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು. ಭೂ ಹೀನ ಕೃಷಿ ಕಾರ್ಮಿಕರಿಗೆ ಭೂಮಿ ಮಂಜೂರು ಮಾಡಬೇಕು ಎಂದರು.
ವಸತಿ ಹೀನರಿಗೆ ಘನತೆಯಿಂದ ಜೀವಿಸಲು ಅನುವು ಮಾಡಿಕೊಡುವುದಕ್ಕಾಗಿ ಉತ್ತಮ ಗುಣಮಟ್ಟದ ‘ಉಚಿತ ವಸತಿ ನೀತಿ’ ಜಾರಿ ಮಾಡಬೇಕು. ಸರ್ಕಾರ ಸಾಮಾನ್ಯ ಜನರ 2 ಮೇಲೆ ವಿಧಿಸುತ್ತಿರುವ ತೆರಿಗೆಯನ್ನು ಕಡಿತಗೊಳಿಸಿ ಸಾಮಾನ್ಯ ಜನರ ಮೇಲಿನ ಹೊರೆ ಕಡಿಮೆ ಮಾಡಬೇಕು. ಶ್ರೀಮಂತ ಉದ್ಯಮಿಗಳ ಮೇಲೆ ‘ಸಂಪತ್ತಿನ ತೆರಿಗೆ’ Weಚಿಟಣh & ಅoಡಿಠಿoಡಿಚಿಣe ಖಿಚಿx ವಿಧಿಸಬೇಕು. ಸಾರ್ವಜನಿಕ ಕ್ಷೇತ್ರಗಳಾದ ಶಿಕ್ಷಣ, ಆರೋಗ್ಯ, ಉದ್ಯೋಗ ಮೂಲಭೂತ ಹಕ್ಕಾಗಬೇಕು. ಹಕ್ಕಾಗಿಸಿ ‘ಸಂವಿಧಾನ’ ಕ್ಕೆ ತಿದ್ದುಪಡಿ ತರಬೇಕು ಎಂದರು.
ರಾಜ್ಯ ಮಹಿಳಾ ಸಂಘಟನಾ ಸಂಚಾಲಕಿ ಪ್ರತಿಭಾ ಹೊಸಮನಿ ಮಾತನಾಡಿ, ಅಸ್ಪøಶ್ಯತೆ ಆಚರಣೆ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಜಾತಿ ಅಸ್ಪøಶ್ಯತೆ ಆಚರಣೆ ವಿರುದ್ಧ ಅಭಿಯಾನ ಆರಂಭಿಸಿ ಜಾಗೃತಿ ಮೂಡಿಸಬೇಕು. ಸರ್ಕಾರಿ, ಆರೆ ಸರ್ಕಾರಿ, ಶಿಕ್ಷಣ ಇಲಾಖೆ, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಬಾಕಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳಬೇಕುಎಂದು ಹೇಳಿದರು.
ಮರ್ಯಾದೆಗೇಡು ಕೊಲೆಗೆ ಕಾರಣವಾಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ಪ್ರಕರಣಗಳನ್ನು ತಡೆಗಟ್ಟಲು ವಿಶೇಷÀ ಕಾನೂನು ರಚನೆ ಆಗಬೇಕು. ಅಂತರ ಜಾತಿ ವಿವಾಹಿತರಿಗೆ ಸೂಕ್ತ ರಕ್ಷಣೆ ಮತ್ತು ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ನೀಡಿ ಪೆÇ್ರೀತ್ಸಾಹಿಸಬೇಕು. ಈ ಎಲ್ಲ ಹಕ್ಕೊತ್ತಾಯಗಳನ್ನು ಸಮಾವೇಶಗಳಲ್ಲಿ ಜಾರಿಗೆ ಆಗ್ರಹಿಸುವುದರ ಮೂಲಕ ಬಾಬಾಸಾಹೇಬರು ಒತ್ತು ಕೊಟ್ಟು ಹೇಳಿದ ‘ಸಾಮಾಜಿಕ ಪ್ರಜಾಪ್ರಭುತ್ವ’ ನಿರ್ಮಿಸುವುದು ಆ ಮೂಲಕ ನಿಜವಾದ ಸ್ವಾತಂತ್ರ್ಯವನ್ನು ಸಾಧಿಸಿ ಸಮ ಸಮಾಜದ ನಿರ್ಮಾಣ ಮಾಡುವುದು ನಮ್ಮಲ್ಲೆರ ಜವಾಬ್ದಾರಿಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದರು.
ಈ ಸಂದರ್ಭದಲ್ಲಿ ನಗರ ಘಟಕ ಸಂಚಾಲಕ ಶಂಕರ ಚಲವಾದಿ, ವಿದ್ಯಾರ್ಥಿ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕು ಮುರುಗೇಶ ದಂಡೆಣ್ಣವರ, ಜಿಲ್ಲಾ ಸಂಘಟನ ಸಂಚಾಲಕು ಚೇತನ ತೊರವಿ, ಜಿಲ್ಲಾ ಸಂಘಟನಾ ಸಂಚಾಲಕ ಯಲ್ಲಪ್ಪ ಕಾಂಬಳೆ ಉಪಸ್ಥಿತರಿದ್ದರು.