ಡಿ.12ರಂದು ಬ್ರಾಹ್ಮಣ ಮಹಾಸಭೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಮೈಸೂರು: ಡಿ.06:- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ರಾಜ್ಯಾಧ್ಯಕ್ಷ ಸ್ಥಾನ ಚುನಾವಣೆ 2021ರ ಚುನಾವಣೆಯ ನಿಮಿತ್ತ ಪತ್ರಿಕಾಗೋಷ್ಠಿಯಲ್ಲಿ ಮುಂದಿನ ಧ್ಯೇಯ ಉದ್ದೇಶಗಳ ಕೈಪಿಡಿ ಬಿಡುಗಡೆಗೊಳಿಸಲಾಯಿತು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಅಧ್ಯಕ್ಷೀಯ ಚುನಾವಣೆ 12-12-2021ರ ಭಾನುವಾರದಂದು ಮೈಸೂರು ಕೃಷ್ಣಮೂರ್ತಿಪುರಂ ಭಗಿನಿ ಸೇವಾ ಸಮಾಜ, ಶಾರದಾ ವಿಲಾಸ್ ಕಾಲೇಜು ಎದುರು, ಕೆಆರ್ ಮೊಹಲ್ಲಾ ಮೈಸೂರು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ಗಂಟೆಯವರೆಗೂ ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ಅಧ್ಯಕ್ಷೀಯ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆರ್.ಲಕ್ಷ್ಮೀಕಾಂತ್ ಆದ ನಾನು ಸ್ಪರ್ಧಿಸುತ್ತಿದ್ದೇನೆ.
ಕಳೆದ ಮೂವತ್ತು ವರ್ಷಗಳಿಂದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ವಿವಿಧ ಹುದ್ದೆಗಳನ್ನು ಅಲಂಕರಿಸಿ ಹಾಲಿ ಉಪಾಧ್ಯಕ್ಷರಾಗಿರುವ ನಾನು ನಮ್ಮ ವಿಪ್ರ ಸಮಾಜದ ಏಳಿಗೆಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿಕೊಂಡಿದ್ದು, ಅವುಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ಮೈಸೂರಿನ ವಿಪ್ರ ಬಾಂಧವರು ನನಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಿ ಜಯಶೀಲರನ್ನಾಗಿ ಮಾಡಬೇಕೆಂದು ಮನವಿ ಮಾಡುತ್ತೇನೆ.
ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಬಡತನ ರೇಖೆಗಿಂತ ಕಡು ಬಡವರಿದ್ದು ಅವರ ಸರ್ವತೋಮುಖ ಅಭಿವೃದ್ಧಿಗಾಗಿ ನಾವು ಕಾರ್ಯಕ್ರಮಗಳನ್ನು ರೂಪಿಸುವುದು ಅನಿವಾರ್ಯವಾಗಿದೆ. ಅಂತಹ ಹಲವು ಹತ್ತು ಯೋಜನೆಗಳನ್ನು ನಾನು ಅನುಷ್ಠಾನಗೊಳಿಸಲು ಉತ್ಸುಕನಾಗಿದ್ದು ಅವುಗಳಲ್ಲಿ ಪ್ರಮುಖವಾದ ಕೆಲವು ಅಂಶಗಳನ್ನು ನಿಮ್ಮ ಮುಂದಿಡುತ್ತಿದ್ದೇನೆ.
ಹೀಗೆ ವಿಪ್ರ ಸಮುದಾಯದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಹಾಕಿಕೊಂಡು ಅವುಗಳ ಅನುಷ್ಠಾನ ಮಾಡಬೇಕಾಗಿರುವುದು ಹಾಗೂ ಇಂದಿನ ಯುವಕರನ್ನು ಮಹಿಳೆಯರನ್ನ ಸಮುದಾಯದ ಮುಖ್ಯವಾಹಿನಿಗೆ ಕರೆತರುವ ಸಲುವಾಗಿ ಶ್ರಮಿಸಲು ನಾನು ಬದ್ಧನಾಗಿದ್ದೇನೆ.
ಆದ್ದರಿಂದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಅಧ್ಯಕ್ಷೀಯ ಚುನಾವಣೆಗಾಗಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ನನ್ನನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸದಸ್ಯರು ಗೆಲ್ಲಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ
ಈ ಪತ್ರಿಕಾಗೋಷ್ಠಿಯಲ್ಲಿ ಪರಮಪೂಜ್ಯ ಇಳೈ ಆಳ್ವಾರ್ ಸ್ವಾಮೀಜಿ, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯ ಅಭ್ಯರ್ಥಿ ಆರ್ ಲಕ್ಷ್ಮೀಕಾಂತ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಕೆ ರಘುರಾಂ ವಾಜಪೇಯಿ, ಮಾಲಿನಿ, ಮೈಸೂರು ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಗೋಪಾಲ್ ರಾವ್, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಾಜ್ಯ ಸದಸ್ಯರಾದ ಎಂ ಆರ್ ಬಾಲಕೃಷ್ಣ, ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಪತ್ರಕರ್ತರಾದ ಅನಿಲ್ ಕುಮಾರ್ ಉಪಸ್ಥಿತರಿದ್ದರು.