ಡಿ.18ರಂದು ರಾಷ್ಟ್ರೀಯ ಲೋಕ್ ಅದಾಲತ್

ದಾವಣಗೆರೆ,ಡಿ.06: ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿ.18ರಂದು ರಾಷ್ಟ್ರೀಯ ಲೋಕ್ ಅದಾಲತ್ ಏರ್ಪಡಿಸಲಾಗಿದೆ ಎಂದು ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.ನಗರದ ಜಿಲ್ಲಾ ನ್ಯಾಯಾಲಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯುವ ಲೋಕ್ ಅದಾಲತ್‌ನಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯಪೂರ್ವ ಪ್ರಕರಣಗಳನ್ನು ಕಕ್ಷಿದಾರರು ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.ಈ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂಎAಡಿಆರ್ ಕಾಯ್ದೆಯಡಿಯ ಮರಳು ಸಾಗಾಟ ಪ್ರಕರಣಗಳನ್ನು, ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಛೇಧನ ಹೊರತುಪಡಿಸಿ), ಪಿಂಚಣಿ, ವೇತನ ಭತ್ಯೆ, ವಿದ್ಯುತ್, ನೀರಿನ ಶುಲ್ಕ, ಕೈಗಾರಿಕಾ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಸೇರಿದಂತೆ ಇತರೆ ಪ್ರಕರಣಗಳನ್ನು ಸಾರ್ವಜನಿಕರು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡು ಹಣ ಮತ್ತು ಸಮಯ ಉಳಿಸಿಕೊಳ್ಳಬೇಕು ಎಂದರು.
ಇಲ್ಲಿ ಇತ್ಯರ್ಥ ಪಡಿಸಿಕೊಂಡ ಪ್ರಕರಣಗಳ ಬಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಹೀಗಾಗಿ, ಎರಡೂ ಕಡೆಯ ಕಕ್ಷಿದಾರರ ಮಧ್ಯೆ ಉತ್ತಮ ಬಾಂಧವ್ಯ ಬೆಳೆಯಲಿದೆ ಎಂದ ಅವರು, ಸೆಪ್ಟೆಂಬರ್ 30ರಂದು ಜಿಲ್ಲೆಯಲ್ಲಿ ನಡೆದ ಲೋಕ್ ಅದಾಲತ್‌ನಲ್ಲಿ 2909 ಪ್ರಕರಣಗಳನನ್ನು ಇತ್ಯರ್ಥಪಡಿಸಿ, 7,67,91,732 ರೂ. ಪರಹಾರ ಕೊಡಿಸಲಾಗಿದ್ದು, ಈ ಬಾರಿ ನಡೆಯುವ ಲೋಕ್ ಅದಾಲತ್‌ನಲ್ಲಿ ಐದು ಸಾವಿರಕ್ಕೂ ಹೆಚ್ಚು ಪ್ರಕರಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಒಟ್ಟು 32,738 ಇತ್ಯರ್ಥವಾಗದ ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು.ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯು ಆದ ಪ್ರವೀಣ್ ನಾಯಕ್ ಮಾತನಾಡಿ, ಈ ಲೋಕ್ ಅದಾಲತ್ ಬಗ್ಗೆ ಬಸ್ ಟಿಕೆಟ್, ಪಾಲಿಕೆ ಕಸ ಸಂಗ್ರಹ ವಾಹನಗಳ ಮೂಲಕ ವ್ಯಾಪಕ ಪ್ರಚಾರ ನಡೆಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಎಎಸ್‌ಪಿ ಎಂ.ರಾಜೀವ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಪಿ.ಬಸವರಾಜ್, ಪ್ರಧಾನ ಕಾರ್ಯದರ್ಶಿ ಲೋಕಿಕೆರೆ ಪ್ರದೀಪ್ ಹಾಜರಿದ್ದರು.Attachments areaReplyReply to allForward