ಡಿ.18 ರಂದು ರಾಷ್ಟ್ರೀಯ ಲೋಕ್ ಅದಾಲತ್

ವಿಜಯಪುರ :ನ.10 : ಮಾನ್ಯ ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿಗಳು ಹಾಗೂ ಮಾನ್ಯ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದ ಮೇರೆಗೆ, ಎಲ್ಲಾ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವುದಕ್ಕಾಗಿ ರಾಷ್ಟ್ರೀಯ-ಲೋಕ್-ಅದಾಲತನ್ನು ದಿನಾಂಕ: 18.12.2021 ರಂದು ನಿಗದಿಪಡಿಸಿದ್ದಾರೆ ಎಂದು ವಿಜಯಪುರ ಜಿ.ಕಾ.ಸೇ.ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಣ್ಣ. ಬಿ. ಹೊಸಮನಿ ಅವರು ತಿಳಿಸಿದ್ದಾರೆ.

ರಾಷ್ಟ್ರೀಯ-ಲೋಕ್-ಅದಾಲತ್ ಕಾರ್ಯಕ್ರಮವನ್ನು ವಿಜಯಪೂರ ಜಿಲ್ಲಾ ಕೇಂದ್ರ ಹಾಗೂ ಎಲ್ಲಾ ತಾಲ್ಲೂಕು ಕೇಂದ್ರದ ಎಲ್ಲಾ ನ್ಯಾಯಾಲಯಗಳಲ್ಲಿ ದಿನಾಂಕ: 18.12.2021 ರಂದು ರಾಷ್ಟ್ರೀಯ-ಲೋಕ್- ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅದರಲ್ಲಿ ರಾಜಿಗೆ ಒಳಪಡಬಹುದಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು, ವರ್ಗಾವಣೆಗಳ ಲಿಖಿತ ಕಾಯ್ದೆಯ ಪ್ರಕರಣಗಳು (ಚೆಕ್ ಬೌನ್ಸ್ ಕೇಸುಗಳು) ಮೋಟಾರು ವಾಹನ ಅಪಘಾತದಲ್ಲಿ ಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳು, ವಿಚ್ಛೇದನವನ್ನು ಹೊರತುಪಡಿಸಿ ಇರುವ ಕೌಟುಂಬಿಕ ವ್ಯಾಜ್ಯಗಳು, ಆಸ್ತಿಯಲ್ಲಿ ವಿಭಾಗ ಕೋರಿರುವ ದಾವೆಗಳು ಹಾಗೂ ಇತರೆ ಸಿವಿಲ್ ವ್ಯಾಜ್ಯಗಳು, ದೂರವಾಣಿ ಬಾಕಿ ಬಿಲ್ಲುಗಳ ಪಾವತಿ ಪ್ರಕರಣಗಳು, ನೀರಿನ ಬಿಲ್ಲ ಪಾವತಿ ಪ್ರಕರಣಗಳು, ಜೀವನಾಂಶ ಭತ್ಯೆ ಕೋರಿರುವ ಪ್ರಕರಣಗಳು, ಕಾಮಿ9ಕ ವ್ಯಾಜ್ಯಗಳು, ಭೂ-ಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಸಾಲ ವಸೂಲಾತಿ ಪ್ರಕರಣಗಳು, ಬ್ಯಾಂಕ್ ವ್ಯಾಜ್ಯಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಮಾನ್ಯ ಕನಾ9ಟಕ ಉಚ್ಛ ನ್ಯಾಯಾಲಯ ಎಸ್.ಓ.ಪಿ. ಪ್ರಕಾರ ರಾಷ್ಟ್ರೀಯ ಲೊಕ್ ಅದಾಲತ್ ಮೂಲಕ ಇತ್ಯರ್ಥಪಡಿಸಲಾಗುವುದು.

ಆದ್ದರಿಂದ ದಿನಾಂಕಃ 18.12.2021 ರಂದು ಕಕ್ಷಿದಾರರು ರಾಷ್ಟ್ರೀಯ ಲೋಕ್ ಅದಾಲತನಲ್ಲಿ ರಾಜಿ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶ ಆಗಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.