ಡಿ.29ರಂದು ಜಿ.ಎಂ.ಈಶ್ವರಪ್ಪರಿಗೆ ಅಭಿನಂದನಾ ಸಮಾರಂಭ

ದಾವಣಗೆರೆ,ಡಿ.26: ಜಿಲ್ಲಾ ಕಸಾಪ, ಜಿಲ್ಲಾ ವರದಿಗಾರರ ಕೂಟ ಹಾಗೂ ಡಾ.ಎಂ.ಜಿ.ಈಶ್ವರಪ್ಪ ಸ್ನೇಹ ಬಳಗ ಇವರ ಸಂಯುಕ್ತಾಶ್ರಯದಲ್ಲಿ ಡಿ.29ರಂದು ನಗರದಲ್ಲಿ ರಾಷ್ಟçಕವಿ ಕುವೆಂಪು ಜನ್ಮ ದಿನದ ಅಂಗವಾಗಿ ವಿಶ್ವ ಮಾನವದಿನಾಚರಣೆ, ರಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಎಂ.ಜಿ.ಈಶ್ವರಪ್ಪ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಒಡಲ ಉಸಿರು ಕೃತಿ ಬಿಡುಗಡೆ ಕಾರ್ಯಕ್ರಮ ಏರ್ಪಡಿಸಲಾಗಿದೆ.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಮಂಜುನಾಥ್ ಕುರ್ಕಿ, ಸಂದು ಸಂಜೆ 4.30ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಜಿ.ಎಂ.ಆರ್.ಆರಾಧ್ಯ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಸಾಹಿತಿ ಬಾ.ಮ.ಬಸವರಾಜ್ ಅಭಿನಂದನಾ ನುಡಿ ಆಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಸವರಾಜ ನೆಲ್ಲಿಸರ ಭಾಗವಹಿಸುವರು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ನಗರವಾಣಿ ಸಹ ಸಂಪಾದಕ ಬಿ.ಎನ್.ಮಲ್ಲೇಶ್ ಅವರು ಶಿವು ಆಲೂರು ಅವರ ‘ಒಡಲ ಉಸಿರು’ ಚೊಚ್ಚಲ ಕೃತಿ ಬಿಡುಗಡೆ ಮಾಡಲಿದ್ದಾರೆ. ಜಿಲ್ಲಾ ಕ.ಸಾಪ. ನಿಕಟಪೂರ್ವ ಅಧ್ಯಕ್ಷ ಎ.ಆರ್.ಉಜ್ಜನಪ್ಪ, ಕೃತಿಕಾರ ಶಿವು ಆಲೂರು ಉಪಸ್ಥಿತರಿರಲಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಂಗೀತ ರಾಘವೇಂದ್ರ ಕುವೆಂಪು ಅವರ ಆಯ್ದ ಗೀತೆಗಳನ್ನು ಹಾಡಲಿದ್ದಾರೆ ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಜಿ.ಎಂ.ಆರ್.ಆರಾಧ್ಯ, ನಗರವಾಣಿ ಸಹ ಸಂಪಾದಕ ಬಿ.ಎನ್.ಮಲ್ಲೇಶ್, ಎ.ಆರ್.ಉಜ್ಜನಪ್ಪ, ಶಿವು ಆಲೂರು, ಬಿ.ದಿಳ್ಯಪ್ಪ, ಎನ್.ಎಸ್.ರಾಜು ಮತ್ತಿತರರು ಹಾಜರಿದ್ದರು.