ಡಿ.29 ರಂದು ರಾಷ್ಟ್ರಕವಿ ಕುವೆಂಪು ವಿಶ್ವಮಾನವ ದಿನಾಚರಣೆ ಅರ್ಥಪೂರ್ಣ ಆಚರಿಸಲು ಸಭೆಯಲ್ಲಿ ನಿರ್ಧಾರ

ಕಲಬುರಗಿ:ಡಿ.21: ರಾಷ್ಟ್ರಕವಿ ಕುವೆಂಪು ವಿಶ್ವಮಾನವ ದಿನಾಚರಣೆಯನ್ನು ಡಿಸೆಂಬರ್ 29 ರಂದು ನಡೆಯುವ ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಠಾಚಾರದ ತಹಶೀಲ್ದಾರ ಸೈಯದ್ ನಿಸಾರ ಅಹ್ಮದ್ ಅವರ ಸಭೆಯ ಅಧ್ಯಕ್ಷತೆಯಲ್ಲಿ ನಿರ್ಧಾರಿಸಲಾಯಿತು.
ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಿರಿಯ ಮತ್ತು ಕಿರಿಯ ಸಾಹಿತ್ಯಗಳೊಂದಿಗೆ ಸಭೆ ನಡೆಸಿ ಮಾತನಾಡಿ, ರಾಷ್ಟ್ರಕವಿ ಕುವೆಂಪು ವಿಶ್ವಮಾನವ ದಿನಾಚರಣೆ ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಆಚರಿಸಬೇಕು ಎಂದು ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯರಾದ ಸುರೇಶ ಬಡೇಗಾರ ಅವರು ಮಾತನಾಡಿ, ಅಂದು ನಡೆಯುವ ಕಾರ್ಯಕ್ರಮ ಕಾಲೇಜಿನ ವಿದ್ಯಾರ್ಥಿಗಳಿಗೆ ಕರೆತರುವ ವ್ಯವಸ್ಥೆ ಮಾಡಬೇಕು ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಭಾಷಣ ಸ್ಪಧೆರ್Éಗಳು ಏರ್ಪಡಿಸಬೇಕು ವಿದ್ಯಾರ್ಥಿಗಳಿಗೆ ಪ್ರಥಮ,ದ್ವಿತೀಯ, ತೃತೀಯ ಸ್ಥಾನ ಪಡೆದವರು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಬೇಕೆಂದು ಸಭೆಯಲ್ಲಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕøತಿಯ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು ಅವರು ಮಾತನಾಡಿ, ನಾವು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಈಗಾಗಲೇ ಹೇಳಿದ್ದೇನೆ ಅವರು ವಿದ್ಯಾರ್ಥಿಗಳಿಗೆ ಕರೆ ತರುವ ವ್ಯವಸ್ಥೆ ಮಾಡುತ್ತಾರೆ ಎಂದರು.
ಸೆಂಟ್ ಜೋಸೆಫ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಸಾಹಿತ್ಯ ಡಾ. ಚಿ.ಸಿ.ಲಿಂಗಣ್ಣ ಅವರು ಮಾತನಾಡಿ, ಜಿಲ್ಲೆಯಲ್ಲಿ ರಾಷ್ಟ್ರಕವಿ ಕುವೆಂಪು ದಿನದಂದು ಮಕ್ಕಳಿಗೆ ಕರೆತರುವ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲು ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.
ರಾಷ್ಟ್ರಕವಿ ಕುವೆಂಪು ವಿಶ್ವಮಾನವ ದಿನಾಚರಣೆ ಅಂದು ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ಡಾ.ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಅಧಿಕಾರಿಗಳು ತಮಗೆ ನೀಡಿದ ಕೆಲಸಗಳನ್ನು ಕಟ್ಟುನಿಟ್ಟಾಗಿ ಪಾಸಲಿಸಬೇಕೆಂದು ಜಿಲ್ಲಾಡಳಿತದ ಶಿಷ್ಠಾಚಾರದ ತಹಶೀಲ್ದಾರ ಸೈಯದ್ ನಿಸಾರ್ ಅಹ್ಮದ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ವೇದಿಕೆ ಒಬ್ಬ ಸಮಿತಿ ಅಧ್ಯಕ್ಷರನ್ನು ಹಾಗೂ ಉಪನ್ಯಾಸಕರನ್ನು ನೇಮಕ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ಕುಡಿಯುವ ನೀರು ಸ್ಪಚ್ಫತೆ ಕಾಪಾಡಿಕೊಂಡು ಹೋಗಲು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು ಅವರು ಮಾತನಾಡಿ, ಕುವೆಂಪು ಅವರ ಸಂಬಂಧಿಸಿದ ಸಂಗೀತ ಕಾರ್ಯಕ್ರಮ ಜರುಗಲಿವೆ. ವೇದಿಕೆ ಅಲಂಕಾರ ಮಾಡಲಾಗುವುದು ಆಮಂತ್ರಣ ಪತ್ರಗಳು ಮುದ್ರಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು. ಅಂದು ನಡೆಯುವ ಜಯಂತಿ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಸರಕಾರಿ ಅರೆ ಸರಕಾರಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ತಾಲೂಕು ಕಚೇರಿಗಳಲ್ಲಿ ಬೆಳಿಗ್ಗೆ 9 ಗಂಟೆ ಜಯಂತಿಯನ್ನು ಆಚರಿಸಬೇಕೆಂದರು.
ಸಭೆಯಲ್ಲಿ ಹಿರಿಯ ಮತ್ತು ಕಿರಿಯ ಸಾಹಿತ್ಯಗಳಾದ ಯುಶವಂತ ಅಷ್ಟಗಿ, ಶಿವಾನಂದ ಮಠಪತಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.