ಡಿ.31ರಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆ

ದಾವಣಗೆರೆ ಡಿ ‌30 : ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಬ್ಲಾಕ್ ಕಾಂಗ್ರೆಸ್ ಹಾಗೂ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರುಗಳ ಸಭೆಯನ್ನು ಡಿಸೆಂಬರ್ 31ರಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಛೇರಿಯ ಎಸ್.ಎಸ್.ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರುಗಳು ಆಗಮಿಸಬೇಕೆಂದು ಈ ಮೂಲಕ ಕೋರಲಾಗಿದೆ.