ಡಿ.31: ಗ್ರಾಮೀಣಾಭಿವೃದ್ದಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಡಿ.೨೯; ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಡಿ. 31 ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಶಿವಮೊಗ್ಗದಿಂದ ಹೊರಟು, ಮಧ್ಯಾಹ್ನ 12 ಗಂಟೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿಗೆ ಆಗಮಿಸುವರು. ಸಚಿವರು ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ನಂತರ ಸಂಜೆ 4 ಗಂಟೆಗೆ ಶಿವಮೊಗ್ಗಕ್ಕೆ ತೆರಳುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.