ಡಿ. 6 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ.ಡಿ.04: ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗ-2 ಯಡ್ರಾಮಿ ಉಪವಿಭಾಗದ 33/11 ಕೆ.ವಿ. ಮಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದುರಸ್ತಿ ಇರುವುದರಿಂದ ಯಡ್ರಾಮಿ ತಾಲೂಕಿನ ಕೆಲ ಗ್ರಾಮಗಳಲ್ಲಿ ದಿನಾಂಕ:6-12-2021 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ತಾಲೂಕಿನ ಮಳ್ಳಿ, ಮಾಗನಗೇರಾ, ಕುಲಗೆರಾ, ಕಾಚಾಪುರ, ವಡಗೆರಾ, ಸುಂಬಡ ಗ್ರಾಮಪಂಚಾಯತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಇದಕ್ಕೆ ಸಹಕರಿಸಬೇಕೆಂದು ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-2 ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.