ಡಿ. 7 ರಿಂದ 9 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ.ಡಿ.04: ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗ-2 ಯಡ್ರಾಮಿಯ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ದುರಸ್ತಿ ಇರುವುದರಿಂದ ಯಡ್ರಾಮಿ ತಾಲೂಕಿನ ಕೆಲ ಗ್ರಾಮಗಳಲ್ಲಿ ದಿನಾಂಕ:7-12-2021 ರಿಂದ 9-12-2021 ರವರೆಗೆ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ತಾಲೂಕಿನ ಆಲೂರ, ಕರಕಿಹಳ್ಳಿ, ಯಲಗೋಡ, ಹಂಗರಗಾ (ಬಿ) ಗ್ರಾಮಪಂಚಾಯತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಇದಕ್ಕೆ ಸಹಕರಿಸಬೇಕೆಂದು ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-2 ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.