ಡೆಲ್ಲಿ ಕ್ಯಾಪಿಟಲ್ಸ್ ನ ಎನ್ರಿಚ್ ಗೆ ಸೋಂಕು: ಐಪಿಎಲ್ ಗೆ ಎದುರಾದ‌ ಆತಂಕ

ನವದೆಹಲಿ, ಏ 14- ದೇಶದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಬೆನ್ನಲ್ಲೇ ದೆಹಲಿ ಕ್ಯಾಪಿಟಲ್ಸ್ ತಂಡದ ಮತ್ತೊಬ್ಬ ವೇಗದ ಬೌಲರ್ ಎನ್ರಿಚ್ ನಾಕಿಯಾ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರಿಂದಾಗಿ ಐಪಿಎಲ್ ಗೆ ಕೊರೊನಾ ಆತಂಕ ಎದುರಾಗಿದೆ.
ಕ್ವಾರಂಟೈನ್ ಸಮಯದಲ್ಲಿ ವೈದ್ಯಕೀಯ ಪರೀಕ್ಷೆಯಲ್ಲಿ ಎನ್ರಿಚ್ ಗೆ ವೈರಾಣು ತಗುಲಿರುವುದು ಖಚಿತವಾಗಿದೆ.
ನೆಗೆಟಿವ್ ವರದಿಯೊಂದಿಗೆ ಅವರು ಮುಂಬೈಗೆ ಬಂದಿಳಿದಿದ್ದರು. ಆದರೆ ಕ್ವಾರಂಟೈನ್ ಅವಧಿಯಲ್ಲಿ ಸೋಂಕು ಪತ್ತೆಯಾಗಿದೆ.
ದಕ್ಷಿಣ ಆಫ್ರಿಕಾದ ವೇಗಿ ನಾಕಿಯಾ ಕೊನೆಯದಾಗಿ ಪಾಕಿಸ್ತಾನ ವಿರುದ್ಧ ಏಕದಿನ ಸರಣಿಯಲ್ಲಿ ಭಾಗವಹಿಸಿದ್ದರು. ಮೊದಲೆರಡು ಪಂದ್ಯಗಳ ಬಳಿಕ ಐಪಿಎಲ್‌ನಲ್ಲಿ ಆಡುವುದಕ್ಕಾಗಿ ಭಾರತಕ್ಕೆ ಪ್ರಯಾಣ ಬೆಳೆಸಿದ್ದರು.

ಐಪಿಎಲ್ ಆರಂಭಕ್ಕೂ ಮೊದಲು ಡೆಲ್ಲಿ ತಂಡದ ಆಟಗಾರ ಅಕ್ಷರ್ ಪಟೇಲ್ ಗೆ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು.

ಮೊದಲ ಪಂದ್ಯದಲ್ಲಿ ಚೆನ್ನೈ ವಿರುದ್ಧ ಗೆಲುವು ದಾಖಲಿಸಿರುವ ಡೆಲ್ಲಿ, ನಾಳೆ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಸೆಣಸಲಿದೆ.