ಡೈರಿಗಳು ಬೆಳಗ್ಗೆ 6 ರಿಂದ ರಾತ್ರಿ 8 ಗಂಟೆಯವರೆಗೆ

ಚಿತ್ರದುರ್ಗ,ಏ.೩೦; ಕೋವಿಡ್ 2 ನೇ ಅಲೆಯನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಈಗಾಗಲೇ ಮೇ 12 ರ ವರೆಗೆ ಲಾಕ್‍ಡೌನ್ ಘೊಷಣೆ ಮಾಡಲಾಗಿದ್ದು ಡೈರಿ ಮಳಿಗೆಗಳಿಗೆ ಪ್ರತಿ ದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತೆರೆಯಲು ಅನುಮತಿ ನೀಡಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
 ಎಲ್ಲಾ ಅಗತ್ಯ ವಸ್ತುಗಳ ಅಂಗಡಿಗಳು, ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟ ಮತ್ತು ಪಡೆದುಕೊಳ್ಳಲು ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅನುಮತಿ ನೀಡಲಾಗಿದೆ. ಆದರೆ ಡೈರಿ ಮಳಿಗೆಗಳಿಗೆ ಮಾತ್ರ ಬೆಳಗ್ಗೆ 6 ರಿಂದ ರಾತ್ರಿ 8 ಗಂಟೆಯವರೆಗೆ ತೆರೆದಿರುತ್ತವೆ. ಸಾರ್ವಜನಿಕರು ಅನಗತ್ಯ ಓಡಾಡದೆ ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಬೇಕು. ಉಳಿದಂತೆ ಕಪ್ರ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.