ಡೈರಿ ಕಟ್ಟಡ ಕಾಮಗಾರಿಗೆ 1,50,000 ರೂ.ಗಳ ದೇಣಿಗೆ

ಕೆ.ಆರ್.ಪೇಟೆ.ಏ:24: ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ವತಿಯಿಂದ ಡೈರಿಕಟ್ಟಡ ಕಾಮಗಾರಿಗೆ 150000 ರೂ ದೇಣಿಗೆ ನೀಡಲಾಯಿತು.
ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಸಿಂಗನಹಳ್ಳಿ ಗ್ರಾಮದ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಶ್ರೀಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯು ಒಂದು ಲಕ್ಷದ ಐವತ್ತು ಸಾವಿರ ರೂಪಾಯಿಗಳನ್ನು ಕೊಡುಗೆಯಾಗಿ ನೀಡಿದೆ.
ತಾಲ್ಲೂಕು ಯೋಜನಾಧಿಕಾರಿ ಮಮತಾಶೆಟ್ಟಿ ಸಂಘದಧ್ಯಕ್ಷೆ ಲೀಲಾವತಿ ಹಾಗೂ ಕಾರ್ಯದರ್ಶಿ ಸುಮಾರವರಿಗೆ ಮಂಜೂರಾತಿ ಪತ್ರವನ್ನು ವಿತರಣೆ ಮಾಡಿ ಮಾತನಾಡಿ ತಾಲ್ಲೂಕಿನಾದ್ಯಂತ ಧರ್ಮಸ್ಥಳ ಸಂಸ್ಥೆ ಹತ್ತು ಹಲವು ಅಭಿವೃದ್ದಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸೇವಾ ಮನೋಭಾವನೆಯಿಂದ ಕೆಲಸ ನಿರ್ವಹಿಸುತ್ತಿದೆ. ಸಾವಿರಾರು ಕುಟುಂಬಗಳಿಗೆ ಸಾಲಸೌಲಭ್ಯ ನೀಡಿ ಅವರುಗಳ ಕುಟುಂಬಕ್ಕೆ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಎಂದು ತಿಳಿಸಿದರು.
ಗ್ರಾಮಪಂಚಾಯಿತಿ ಸದಸ್ಯ ಕುಬೇರ, ಸೇವಾ ಪ್ರತಿನಿಧಿ ಶೋಬಾ, ಮೇಲ್ವಿಚಾರಕ ಸತೀಶ್, ಸೇರಿದಂತೆ ಹಲವರು ಹಾಜರಿದ್ದರು.